ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ವಿಮಾನ ನಿಲ್ದಾಣದಲ್ಲಿ 32.96 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ವಶ: ಓರ್ವನ ಬಂಧನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್ 28: ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಂದ 32.96 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡು, ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಅಬುಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ ದುಬೈನಿಂದ ಮಂಗಳೂರಿಗೆ ಬಂದಿದ್ದು, ಅಕ್ರಮ ಚಿನ್ನ ಸಾಗಿಸುತ್ತಿರುವುದು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ವೇಳೆ ಎಂದು ತಿಳಿದು ಬಂದಿದೆ.

Illegal Gold Siezed By Customs Officers In Mangaluru Airport: One Arrested

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಬುಬಕ್ಕರ್ ಸಿದ್ದಿಕ್ ಪೌಡರ್ ರೂಪದಲ್ಲಿ ಚಿನ್ನ ಅಡಗಿಸಿಟ್ಟು ತರುತ್ತಿದ್ದ ಎಂದು ತಿಳಿದು ಬಂದಿದ್ದು, ತಪಾಸಣೆ ನಡೆಸಿದ ವೇಳೆ ಆತನ ದೇಹದಲ್ಲಿ 634 ಗ್ರಾಂ ಚಿನ್ನ ಪತ್ತೆಯಾಗಿದೆ.

ಅಬುಬಕ್ಕರ್ ಸಿದ್ದಿಕ್ ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದಾನೆ. ತಪಾಸಣೆ ನಡೆಸುವ ವೇಳೆ 24 ಕ್ಯಾರೆಟ್ ನ 634 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 32,96,800 ರೂ. ಎಂದು ಅಂದಾಜಿಸಲಾಗಿದೆ.

English summary
Illegal gold has been seized from a passenger who arrived at the Mangaluru International Airport from Dubai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X