ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ರಮ ಮರಳುಗಾರಿಕೆ: ಮಂಗಳೂರು ಹೊರವಲಯದಲ್ಲಿ 12ಕ್ಕೂ ಅಧಿಕ ಬೋಟ್ ವಶ

|
Google Oneindia Kannada News

ಮಂಗಳೂರು, ಡಿಸೆಂಬರ್ 30: ಮಂಗಳೂರು ಹೊರವಲಯದ ಜಪ್ಪಿನಮೊಗರು, ಹರೇಕಳ ಎಂಬಲ್ಲಿ ಪರವಾನಿಗೆಯಿಲ್ಲದೆ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ, ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಮರಳುಗಾರಿಕೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ 12ಕ್ಕೂ ಅಧಿಕ ಬೋಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಜೂಜು ಅಡ್ಡೆ ಮೇಲೆ ದಾಳಿ 16.43 ಲಕ್ಷ ನಗದು ವಶಬೆಂಗಳೂರು: ಜೂಜು ಅಡ್ಡೆ ಮೇಲೆ ದಾಳಿ 16.43 ಲಕ್ಷ ನಗದು ವಶ

ಜಿಲ್ಲೆಯ ಸಿಆರ್ ಝೆಡ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮರಳುಗಾರಿಕೆ ನಡೆಸಲು 76 ಮಂದಿಗೆ ಪರವಾನಿಗೆ ನೀಡಲಾಗಿತ್ತು. ಆದರೆ ಕೆಲವರು ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಅರೋಪ ಕೇಳಿಬಂದಿತ್ತು. ಈ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾರ್ಗದರ್ಶನದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Illegal sand mining raided in Mangaluru

ಮಂಗಳೂರಲ್ಲಿಅಕ್ರಮ ದಾಸ್ತಾನು ಇರಿಸಿದ್ದ ಗೋಡೌನ್ ಮೇಲೆ ದಾಳಿಮಂಗಳೂರಲ್ಲಿಅಕ್ರಮ ದಾಸ್ತಾನು ಇರಿಸಿದ್ದ ಗೋಡೌನ್ ಮೇಲೆ ದಾಳಿ

ಈ ಅಕ್ರಮ ಮರಳುಗಾರಿಕೆಯ ಬಗ್ಗೆ ಈ ಕೂಡಲೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ‌ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ, ಕಂದಾಯ ಇಲಾಖೆ ಅಧಿಕಾರಿಗಳು ಶುಕ್ರವಾರ ಹರೇಕಳ, ಜಪ್ಪಿನಮೊಗರುವಿನ ಮರಳುಗಾರಿಕೆ ಪ್ರದೇಶಕ್ಕೆ ದಾಳಿ ನಡೆಸಿ, 12 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ಸಂದರ್ಭದಲ್ಲಿ ಅಧಿಕಾರಿಗಳನ್ನು ಕಂಡ ಕಾರ್ಮಿಕರು ಪರಾರಿಯಾಗಿದ್ದಾರೆ.

English summary
Officials of department of mine and Geology seized 12 boats engaged in illegal sand mining at Jeppinamugaru near Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X