ಮಂಗಳೂರು: ಕಾರಿನಲ್ಲಿ ಗೋವುಗಳ ಅಕ್ರಮ ಸಾಗಾಟ, ಪೊಲೀಸರಿಂದ ಗುಂಡು

ಮಂಗಳೂರು, ಅಕ್ಟೋಬರ್ 11: ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿ ಹೋದ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದರೆಯ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ.

ಭಾನುವಾರ ಬೆಳಗಿನ ಜಾವ ಗೋಕಳ್ಳರು ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದರೆಯ ಶಿರ್ತಾಡಿಯಿಂದ 6 ಗೋವುಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿತ್ತು.

ಹೀಗಾಗಿ ಮೂಡಬಿದರೆ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಬಿ.ಎಸ್ ದಿನೇಶ್ ಕುಮಾರ್ ತಂಡ, ಆರೋಪಿಗಳು ಗೋವುಗಳನ್ನು ಸಾಗಿಸುತ್ತಿದ್ದ ರಿಟ್ಸ್ ಕಾರನ್ನು ಹಿಂಬಾಲಿಸಿಕೊಂಡು ಹೋದರು. ಈ ವೇಳೆ ಆರೋಪಿಗಳು ಪೊಲೀಸ್ ಜೀಪ್ ಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದು, ತಕ್ಷಣ ಇನ್‍ಸ್ಪೆಕ್ಟರ್ ಬಿ.ಎಸ್ ದಿನೇಶ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

 Mangaluru: Illegal Shipment Of Cows In Car, Shot By Police

ಇದರಿಂದ ಹೆದರಿದ ಆರೋಪಿಗಳು ಕಾರು ಹಾಗೂ ಹಸುಗಳನ್ನು ಅಲ್ಲೇ ಬಿಟ್ಟು ಓಡಿ ಪರಾರಿಯಾಗಿದ್ದಾರೆ. ಕಾರು ಹಾಗೂ ಹಸುಗಳನ್ನು ವಶಪಡಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಬಗ್ಗೆ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+