ದ.ಕ. ಲೋಕಸಭಾ ಕ್ಷೇತ್ರ:ಎಸ್ಡಿಪಿಐ ಅಭ್ಯರ್ಥಿಯಾಗಿ ಇಲ್ಯಾಸ್ ತುಂಬೆ ಆಯ್ಕೆ
ಮಂಗಳೂರು, ಮಾರ್ಚ್ 19:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಭಾರೀ ಚಟುವಟಿಕೆ ನಡೆಯುತ್ತಿದೆ. ಟಿಕೆಟ್ ಅಕಾಂಕ್ಷಿಗಳ ನಡುವೆ ಆರೋಪ ಪ್ರತ್ಯಾರೋಪ, ಲಾಭಿ ಪ್ರಕ್ರಿಯೆ ಬಿರುಸುಗೊಂಡಿದೆ.
ಈ ನಡುವೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿರುವ ತನ್ನ ಅಭ್ಯರ್ಥಿಯನ್ನು ಎಸ್ ಡಿಪಿಐ ಘೋಷಿಸಿದೆ. ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿಯಾಗಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಕಣಕ್ಕೆ ಇಳಿಯಲಿದ್ದಾರೆ.
ಎಸ್ ಡಿಪಿಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ದಕ್ಷಿಣ ಕನ್ನಡ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರ ಹೆಸರನ್ನು ಘೋಷಿಸಿದ್ದಾರೆ.

ಈ ದೇಶದ ಸ್ವಾತಂತ್ರ್ಯ, ಸಂವಿಧಾನವನ್ನು ಯಾವ ಬೆಲೆ ತೆತ್ತಾದರೂ ಉಳಿಸಿ, ಹಸಿವು ಮುಕ್ತ ದೇಶ, ಭಯ ಮುಕ್ತ ದೇಶವನ್ನಾಗಿ ಮಾಡಿ ಸಂವಿಧಾನದ ಆಶಯದಂತೆ ಭಾರತದ ಪುನರ್ ನಿರ್ಮಾಣವೇ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಗುರಿ ಎಂದು ಅಬ್ದುಲ್ ಮಜೀದ್ ತಿಳಿದ್ದಾರೆ.












Click it and Unblock the Notifications