ರಸ್ತೆ ದುರಸ್ತಿ, ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡ ಕಟೀಲ್
ಮಂಗಳೂರು, ಆಗಸ್ಟ್ 29 : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪಡೀಲ್ ಬಳಿ ಹದಗೆಟ್ಟಿರುವ ರಸ್ತೆಯನ್ನು ಈ ಕೂಡಲೇ ದುರಸ್ತಿ ಗೊಳಿಸಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ದುರಸ್ತಿ ಕಾಮಗಾರಿ ಪರಿಶೀಲನೆ ಮಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗು ರೈಲ್ವೆ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ರಸ್ತೆ ದುರಸ್ತಿ ಕಾಮಗಾರಿ ಅತಿ ಶೀಘ್ರದಲ್ಲಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು .

ಮಂಗಳೂರು ಹೊರವಲಯದ ಪಡೀಲ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಸ್ತೆ ಹದಗೆಟ್ಟಿರುವ ಕಾರಣ ವಾಹನ ಸವಾರರು ಭಾರೀ ಸಂಕಷ್ಟ ಎದುರಿಸುತ್ತಿದ್ದರು. ಪ್ರತಿದಿನ ಪಡೀಲ್ ಬಳಿ ಟ್ರಾಫಿಕ್ ಜಾಮ್ ಸಾಮಾನ್ಯವಾಗಿದ್ದು ವಾಹನ ಸವಾರರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇದೆ.

ಪಡೀಲ್ ಬಳಿಯ ರೈಲ್ವೆ ಮೇಲ್ಸೇತುವೆಯ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದ್ದು ರೈಲ್ವೆ ಟ್ರ್ಯಾಕ್ ನ ಅಡಿಭಾಗದಲ್ಲಿ ಹೆದ್ದಾರಿಗೆ ಬಾಕ್ಸ್ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಕಳೆದ ಕೆಲವು ತಿಂಗಳಿಂದ ನಡೆಯುತ್ತಿರುವ ಈ ಕಾಮಗಾರಿ ಕುಂಟುತ್ತಾ ಸಾಗುತಿತ್ತು.












Click it and Unblock the Notifications