ಜ. 28 ಸಶಸ್ತ್ರ ಮೀಸಲು ಪೊಲೀಸ್ ಪಡೆ ಪರೀಕ್ಷೆ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ ಇಲ್ಲಿದೆ

ಮಂಗಳೂರು, ಜನವರಿ 25: ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಪರೀಕ್ಷೆಯಂದು ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಧರಿಸಿ, ಶೂ, ಆಭರಣ, ಜೀನ್ಸ್ ತೊಡುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸೂಚನೆ ನೀಡಿದೆ.

ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಎಆರ್/ಡಿಎಆರ್) ಖಾಲಿ ಇರುವ (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆ ಜನವರಿ 28ರಂದು ಬೆಳಗ್ಗೆ 11ರಿಂದ 12:30ರವರೆಗೆ ಮೂಡಬಿದಿರೆಯ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಸುಮಾರು 17,000 ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆಯಿದೆ.

Important Notice For Armed Reserve Police Force Exam Candidates

ಅಭ್ಯರ್ಥಿಗಳಿಗೆ ಸಾಮಾನ್ಯ ಸೂಚನೆಗಳು

1. ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಕನಿಷ್ಟ 120 ನಿಮಿಷಗಳ ಮುಂಚೆ ಅಂದರೆ ಬೆಳಿಗ್ಗ 9:00 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರತಕ್ಕದ್ದು.

2. ಅಭ್ಯರ್ಥಿಗಳು ಯಾವುದೇ ಇಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ಫೋನ್‌ಗಳು, ಬ್ಲೂಟೂತ್ ಉಪಕರಣಗಳು, ಪೇಪರ್ ತುಂಡು, ಪುಸ್ತಕಗಳು, ನೋಟ್ಸ ಪುಸ್ತಕಗಳು ಇತ್ಯಾದಿ ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ.

3. ಅಭ್ಯರ್ಥಿಗಳನ್ನು ಅವರವರ ಪ್ರವೇಶ ಪತ್ರದೊಂದಿಗೆ ಯಾವುದಾದರೂ ಗುರುತಿನ ಚೀಟಿ ಉದಾ: ಚಾಲನಾ ಅನುಜ್ಞಾ ಪತ್ರ, ಪಾಸ್‌ಪೋರ್ಟ್‌/ಆಧಾರ್ ಕಾರ್ಡ್/ಪಾನ್ ಕಾರ್ಡ್/ಓಟರ್ ಐಡಿ(EPIC) ಗಳನ್ನು ತೆಗೆದುಕೊಂಡು ಹೋಗಬೇಕು. ಬಳಿಕ ಪರಿಶೀಲಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುವುದು.

4. ಸದರಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.

ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಸೂಚನೆಗಳು

* ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‌ಗಳನ್ನು ಧರಿಸಬೇಕು. ಜಿಪ್ ಇರುವ ಪಾಕೆಟ್, ದೊಡ್ಡ ಬಟನ್‌ಗಳು ಇರುವ ಶರ್ಟ್‌ಗಳನ್ನು ಧರಿಸುವಂತಿಲ್ಲ.

*ಜೀನ್ಸ್ ಪ್ಯಾಂಟ್ ಹಾಗೂ ಅಧಿಕ ಪಾಕೆಟ್‌ಗಳಿರುವ ಶರ್ಟ್‌ಗಳನ್ನು ಧರಿಸುವಂತಿಲ್ಲ.

* ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು.

*ಲೋಹದ ಸರ, ಉಂಗುರ ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+