• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇರಳ ಚುನಾವಣಾ ಪ್ರಚಾರ: ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ಗೆ ಕೊರೊನಾ ಸೋಂಕು

|

ಮಂಗಳೂರು, ಏಪ್ರಿಲ್ 3: ಕೇರಳ ಚುನಾವಣಾ ಪ್ರಚಾರ ಸಭೆಯಲ್ಲಿ ತೊಡಗಿದ್ದ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ಗೆ ಕೊರೊನಾ ಸೋಂಕು ತಗುಲಿದೆ.

ಈ ನಡುವೆ ಸುನಿಲ್‌ ಕುಮಾರ್ ಅವರ ಜೊತೆಗ ತಂಗಿದ್ದ ಸಿಬ್ಬಂದಿಗಳು ಹಾಗೂ ಸಂಪರ್ಕದಲ್ಲಿದ್ದವರೆಲ್ಲರೂ ಸ್ವಯಂಪ್ರೇರಿತರಾಗಿ ಐಸೋಲೇಷನ್ ನಲ್ಲಿದ್ದಾರೆ. ಇನ್ನೂ ಕೆಲ ದಿನಗಳ ಕಾಲ ಸುನೀಲ್ ಕುಮಾರ್ ಹಾಗೂ ಅವರೊಂದಿಗೆ ಸಂಪರ್ಕದಲ್ಲಿದ್ದವರಾರೂ ಪ್ರಚಾರ ಕಾರ್ಯದಲ್ಲಿ ತೊಡಗುವುದಿಲ್ಲ ಎಂದು ವರದಿಗಳು ತಿಳಿಸಿವೆ.

ಕೇರಳ ಬಿಜೆಪಿ ಸಹ ಪ್ರಭಾರಿಯಾಗಿರುವ ಸುನಿಲ್‌ ಕುಮಾರ್‌ ಅವರು, ಕಳೆದ 3 ತಿಂಗಳುಗಳಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಸುನಿಲ್ ಅವರಿಗೆ ಶುಕ್ರವಾರ ಕೊರೊನಾ ದೃಢಪಟ್ಟಿದ್ದು, ಶಾಸಕರು ಕ್ವಾರಂಟೈನ್‌ನಲ್ಲಿದ್ದಾರೆಂದು ತಿಳಿದುಬಂದಿದೆ.

ಅಧಿವೇಶನ ಪೂರ್ಣಗೊಂಡ ಬಳಿಕ ರಾಜ್ಯದ ಬಿಜೆಪಿ ನಾಯಕರಾದ ನಳಿನ್ ಕುಮಾರ್ ಕಟೀಲ್, ಗಣೇಶ್ ಕಾರ್ನಿಕ್ ಸೇರಿದಂತೆ ಸಾಕಷ್ಟು ನಾಯಕರು ಕೇರಳದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಬಿಜೆಪಿ ಶಾಸಕ ರಘುಪತಿ ಭಟ್ ಅವರು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಪ್ರಚಾರ ನಡೆಸುತ್ತಿದ್ದರೆ, ಇತರೆ ಪಕ್ಷದ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಮತ್ತು ರಾಜೇಶ್ ನಾಯಕ್ ಅವರು ಕೇರಳದಲ್ಲಿ ಕಳೆದ ಎರಡು ವಾರಗಳಿಂದ ಭಾರೀ ಪ್ರಚಾರ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕೂಡ ಕೇರಳದಲ್ಲಿಯೇ ಇದ್ದು, ಕೊಚ್ಚಿ ಮತ್ತು ತಿರುವನಂತಪುರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

English summary
BJP Karkala MLA and party chief whip Vasudev Sunil Kumar tested positive for Covid-19 on Friday evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X