ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

SSlC:ತುಳು ಭಾಷೆಯಲ್ಲಿ ಪರೀಕ್ಷೆ ಬರೆದು 100ಕ್ಕೆ 100 ಅಂಕ ಪಡೆದ 63 ವಿದ್ಯಾರ್ಥಿಗಳು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮೇ.02:ತುಳುವನ್ನು ತೃತೀಯ ಭಾಷೆಯಾಗಿ ಕಲಿತು ಎಸ್. ಎಸ್.ಎಲ್.ಸಿ ಪರೀಕ್ಷೆ ಬರೆದ 617 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದು, ಶೇಕಡಾ 100 ಫಲಿತಾಂಶ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 41 ಶಾಲೆಗಳಲ್ಲಿ 8, 9 ಮತ್ತು 10 ನೇ ತರಗತಿಗಳಲ್ಲಿ ತುಳು ಭಾಷೆಯ ಪಠ್ಯ ಕಲಿಸಲಾಗುತ್ತಿದ್ದು, ಈ ಪೈಕಿ 34 ಶಾಲೆಗಳ 617 ವಿದ್ಯಾರ್ಥಿಗಳು 10ನೇ ತರಗತಿಯ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಪಾಸಾಗಿದ್ದು, ಈ ಪೈಕಿ ಸುಮಾರು 63 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.

In Tulu examination 63 students got 100 marks

SSLC ಫಲಿತಾಂಶ ರಾಮನಗರಕ್ಕೆ 2ನೇ ಸ್ಥಾನ: ಜಿಲ್ಲಾಧಿಕಾರಿ ಅಭಿನಂದನೆSSLC ಫಲಿತಾಂಶ ರಾಮನಗರಕ್ಕೆ 2ನೇ ಸ್ಥಾನ: ಜಿಲ್ಲಾಧಿಕಾರಿ ಅಭಿನಂದನೆ

"ತುಳುವಿನಲ್ಲಿ ಉತ್ತಮ ಸಾಧನೆ ದಾಖಲಿಸುವ ಮೂಲಕ ಶಾಲೆಗಳ ಫಲಿತಾಂಶ ಹಾಗೂ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಏರಿಕೆಯಾಗಿರುವುದು ಕಂಡುಬರುತ್ತದೆ. ಮುಂದಿನ ವರ್ಷಗಳಲ್ಲಿ ತುಳು ಪಠ್ಯ ಭೋಜನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಆಯ್ಕೆ ಮಾಡಿರುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತಿದೆ" ಎಂದು ತುಳು ಅಕಾಡೆಮಿ ಅಧ್ಯಕ್ಷ ಎಸಿ ಭಂಡಾರಿ ತಿಳಿಸಿದ್ದಾರೆ.

English summary
SSLC result 2019: Tulu language is taught in schools in Dakshina Kannada and Udupi district. In Tulu examination, 63 students got 100 marks. Similarly, 617 students passed the exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X