Mangaluru Airport: ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಭಾರೀ ಅನಾಹುತ
Mangaluru Airport: ಮೇ 25: ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂಡಿಗೋ ವಿಮಾನ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರ ಸಹಿತ ಬೆಳಗ್ಗೆ 8.30ಕ್ಕೆ ದುಬೈಗೆ ಹೊರಟಿತ್ತು. ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಎಟಿಸಿ ಸೂಚನೆ ಮೇರೆಗೆ ವಿಮಾನ ಟೇಕಾಫ್ ರದ್ದು ಮಾಡಿ ರನ್ ವೇನಿಂದ ವಾಪಾಸ್ ಬಂದಿದ್ದು, ಸದ್ಯ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ನಡೆಸಲಾಗಿದೆ.
ಬಳಿಕ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರಿಗೆ ದುಬೈಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ. ಈ ಘಟನೆಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.












Click it and Unblock the Notifications