ಕುಖ್ಯಾತ ದನಗಳ್ಳನನ್ನು ಬಂಧಿಸಿದ ಮಂಗಳೂರು ಪೊಲೀಸರು

ಮಂಗಳೂರು, ಜುಲೈ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೋ ಕಳ್ಳತನ ಪ್ರಕರಣಕ್ಕೆ ಕಡಿವಾಣ ಹಾಕಲು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಮಂಗಳೂರು ಉತ್ತರ ಉಪವಿಭಾಗದ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಅಂತರ್ ಜಿಲ್ಲಾ ದನಕಳ್ಳತನ ಮತ್ತು ಮಾರಾಟದ ಆರೋಪಿಯನ್ನು ಬಂಧಿಸಿದ್ದಾರೆ.

ವಿಷೇಷ ಅಪರಾಧ ಪತ್ತೆ ದಳ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮೂಡುಬಿದ್ರೆ ತೋಡಾರ್ ನಿವಾಸಿ, ದನಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಶೀರ್ ಯಾನೆ ಆರ್ಗಾ ಬಶೀರ್ ಎಂಬಾತನನ್ನು ಬಂಧಿಸಿದ್ದಾರೆ.

ದನಕಳ್ಳತನವನ್ನೇ ತನ್ನ ಕಸುಬನ್ನಾಗಿಸಿಕೊಂಡಿದ್ದ ಬಶೀರ್ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕೆಲದಿನಗಳ ಹಿಂದೆ ಈತನ ಸಹಚರರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಲಯದಿಂದ ಮುಂಜಾಗ್ರತಾ ಜಾಮೀನು ಪಡೆದು ಬಳಿಕ ಅದೇ ಕೃತ್ಯದಲ್ಲಿ ಬಶೀರ್ ತೊಡಗಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

Inter district cattle thief arrested in Mangaluru

ಇತ್ತೀಚೆಗೆ ಉಜಿರೆಯ ಬಳಿ ಐಷಾರಾಮಿ ಕಾರಿನಲ್ಲಿ ದನಗಳನ್ನು ಕಳ್ಳತನ ಮಾಡಿ ಸಾಗಿಸುತ್ತಿದ್ದ ಸಂದರ್ಭ ಅಪಘಾತವಾಗಿ ವಾಹನದಲ್ಲಿದ್ದ ದನಗಳು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಈ ವಾಹನದಲ್ಲಿ ಈತನೇ ಚಾಲಕನಾಗಿದ್ದು, ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು ಹೊರವಲಯದ ಸುರತ್ಕಲ್, ಕೃಷ್ಣಾಪುರ ಸೇರಿದಂತೆ ನೈತಂಗಡಿ ಬಳಿ ಗೀತಾ ಎಂಬುವರ ಮನೆಯಿಂದ ದನ ಕಳ್ಳತನ ಮಾಡಿದ ಆರೋಪಿಗಳ ಪೈಕಿ ಈತನೇ ಪ್ರಮುಖನಾಗಿದ್ದ ಎಂದೂ ತಿಳಿದುಬಂದಿದೆ. ಬಶೀರ್ ವಿರುದ್ಧ ಚಿಕ್ಕಮಗಳೂರಿನಲ್ಲಿ 2, ಕೊಡಗಿನಲ್ಲಿ 3, ದ.ಕ. ಜಿಲ್ಲೆಯಲ್ಲಿ 9 ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+