ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಮಂಗಳೂರು ಜೂನ್ 21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಉಜಿರೆ ಆಶ್ರಯದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ರಾಜ್ಯ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಉದ್ಘಾಟಿಸಿದರು. ಸಭಾಭವನದಲ್ಲಿ ಒಂದು ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಎಸ್.ಡಿ.ಎಂ.ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಪ್ರತಿನಿಧಿಗಳು, ಎಸ್.ಡಿ.ಎಂ .ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳು ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಭೆಯ ಅಧ್ಯಕ್ಷ ತೆ ವಹಿಸಿದ್ದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಅಭಯಚಂದ್ರ ಜೈನ್, ಶ್ರೀಮತಿ ಹೇಮಾವತಿ ಡಿ .ಹೆಗ್ಗಡೆ, ಎಸ್.ಡಿ.ಎಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಯೋಗ ಕಾರ್ಯಕ್ರಮದ ಬಳಿಕ ಧರ್ಮಸ್ಥಳ ಮತ್ತು ಶಾಂತಿವನ ಪರಿಸರದಲ್ಲಿ ಯೋಗ ಪ್ರತಿನಿಧಿಗಳಿಂದ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.












Click it and Unblock the Notifications