ಇಸ್ರೇಲ್‌ನಲ್ಲಿ 12 ಸಾವಿರಕ್ಕೂ ಅಧಿಕ ಕರಾವಳಿ ಕನ್ನಡಿಗರು: ಹೇಗಿದೆ ಯುದ್ಧ ಭೂಮಿ..?
ಮಂಗಳೂರು, ಅಕ್ಟೋಬರ್ 09: ಪ್ಯಾಲೇಸ್ತೀನ್‌ನ ಹಮಾಸ್ ಉಗ್ರರು ದಾಳಿ ನಡೆಸಿರುವ ಇಸ್ರೇಲ್‌ನಲ್ಲಿ 12 ಸಾವಿರಕ್ಕೂ ಅಧಿಕ ಕರಾವಳಿ ಕನ್ನಡಿಗರಿದ್ದಾರೆ. ಗಡಿನಾಡು ಕಾಸರಗೋಡಿನ ಗೋವಾದ ಗಡಿಭಾಗ ಕಾರವಾರದವರೆಗೆ ಇಸ್ರೇಲ್‌ನಲ್ಲಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಇವರೆಲ್ಲರೂ ಯುದ್ಧ ಪೀಡಿತ ಪ್ರದೇಶದ ಸುತ್ತಮುತ್ತಲೇ ಇದ್ದರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ಇವರಲ್ಲಿ ಶೇಕಡಾ 50ರಷ್ಟು ಮಹಿಳೆಯರೂ ಇದ್ದಾರೆ. ಇವರಲ್ಲಿ ಅಧಿಕ ಮಂದಿ ಕ್ರಿಶ್ಚಿಯನ್ ಸಮುದಾಯದವರಾಗಿದ್ದು, ಹಿಂದೂಗಳೂ ಇದ್ದಾರೆ. 8 ಸಾವಿರಕ್ಕೂಅಧಿಕ ಮಂದಿ ದಕ್ಷಿಣ ಕನ್ನಡದವರೂ ಇದ್ದಾರೆ ಎಂದು ತಿಳಿದು ಬಂದಿದೆ. ಇವರೆಲ್ಲರೂ ಭಾರತದ ಹೋಮ್ ನರ್ಸ್ ಮಾದರಿಯ ಕೇರ್ ಗೀವರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ.

ಕಳೆದ 16 ವರ್ಷಗಳಿಂದ ಇಸ್ರೇಲ್‌ನ ಟಲ್ ಅವೀವ್‌ನಲ್ಲಿ ಮಂಗಳೂರಿನ ಹೊರವಲಯದ ದಾಮಸ್ ಕಟ್ಟೆಯ ಪ್ರವೀಣ್ ಪಿಂಟೋ ಕುಟುಂಬ ನೆಲೆಸಿದೆ. ಅದೇ ರೀತಿ ಮಂಗಳೂರು ಮೂಲದ ಲೆನಾರ್ಡ್ ಫರ್ನಾಂಡೀಸ್ ಕಳೆದ 14 ವರ್ಷಗಳಿಂದ ಇಸ್ರೇಲ್ ವಾಸಿಯಾಗಿದ್ದಾರೆ. ಆದ್ದರಿಂದ ಮಂಗಳೂರಿನಲ್ಲಿ ಪ್ರವೀಣ್ ಪಿಂಟೋ ಹಾಗೂ ಲೆನಾರ್ಡ್ ಫರ್ನಾಂಡೀಸ್ ಕುಟುಂಬ ಆತಂಕದಲ್ಲಿದೆ. ದೂರವಾಣಿ ಮೂಲಕ ಅವರುಗಳ ಸುರಕ್ಷತೆಯನ್ನು ಕುಟುಂಬ ಖಾತರಿ ಪಡೆಸುತ್ತಿದೆ. ಬಂಕರ್‌ಗಳಲ್ಲಿ ಇಬ್ಬರೂ ಸುರಕ್ಷಿತವಾಗಿರುವ ಮಾಹಿತಿ ಲಭ್ಯವಾಗಿದೆ. ಮನೆಯಿಂದ ಹೊರ ಬಾರದಂತೆ ಭಾರತೀಯ ರಾಯಭಾರ ಕಚೇರಿ ಸೂಚನೆಯನ್ನು ನೀಡಿದೆ ಎಂದು ತಿಳಿದು ಬಂದಿದೆ.
ಯುದ್ಧದ ಪರಿಸ್ಥಿತಿ ಬಗ್ಗೆ ವಾಮಂಜೂರಿನ ಲೆನಾರ್ಡ್ ಫರ್ನಾಂಡೀಸ್ ಪ್ರತಿಕ್ರಿಯೆ ನೀಡಿ, 'ನಾನು ಕಳೆದ 14 ವರ್ಷದಿಂದ ಇಸ್ರೇಲ್ ನಲ್ಲಿದ್ದೇನೆ. ಹಲವು ರಾಕೆಟ್ ದಾಳಿಗಳನ್ನು ನೋಡಿದ್ದೇನೆ. ಆದರೆ ಈಗಿನಷ್ಟು ಯುದ್ಧದ ಪರಿಸ್ಥಿತಿಯನ್ನು ಇದುವರೆಗೆ ಕಂಡಿಲ್ಲ. ದಿನದಲ್ಲಿ ಮೂರ್ನಾಲ್ಕು ಬಾರಿ ಸೈರನ್ ಆಗುತ್ತಿದ್ದು, ನಾವು ಕೂಡಲೇ ಮನೆಯ ಶೆಲ್ಟರ್‌ಅನ್ನು ಸೇರುತ್ತಿದ್ದೇವೆ. ಇಸ್ರೇಲ್‌ನ ಪ್ರತಿ ಮನೆಯಲ್ಲೂ ಸಣ್ಣ ಪ್ರತ್ಯೇಕ ಕೋಣೆ ಇರುತ್ತದೆ. ಇದು ಪ್ರಾಣ ರಕ್ಷಣೆಗೆ ನೆರವಾಗುತ್ತದೆ. ಸೈರನ್ ಮೊಳಗಿದ ಕೂಡಲೇ ಶೆಲ್ಟರ್ ಸೇರುತ್ತೇವೆ' ಎಂದು ಲೆನಾರ್ಡ್ ಹೇಳಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications