ಬೆಳ್ಳಂಬೆಳಗ್ಗೆ ಕರಾವಳಿಯ ಚಿನ್ನದಂಗಡಿ ಮಾಲೀಕರಿಗೆ ಶಾಕ್: ಆಭರಣ ಜ್ಯುವೆಲ್ಲರಿಯ ಮೇಲೆ ಐಟಿ ದಾಳಿ
ಮಂಗಳೂರು, ಅಕ್ಟೋಬರ್ 31: ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಚಿನ್ನದಂಗಡಿ ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಕದ್ರಿ ಆಭರಣ ಸೇರಿದಂತೆ ವಿವಿಧ ಚಿನ್ನದಂಗಡಿಗಳ ಮೇಲೆ ಐಟಿ ದಾಳಿಯಾಗಿದೆ.
ಮಂಗಳೂರಿನ ಕದ್ರಿಯ ಬಳಿಯ ಶಿವಭಾಗ್ನ ಆಭರಣ ಜ್ಯುವೆಲ್ಲರಿಯ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದು, ಬೆಳಗ್ಗಿನಿಂದ ದಾಖಲೆಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಐದಾರು ಜನ ಐಟಿ ಅಧಿಕಾರಿಗಳ ತಂಡದಿಂದ ಜ್ಯುವೆಲ್ಲರಿಯಲ್ಲಿ ಪರಿಶೀಲನೆ ನಡೆಯುತ್ತಿದ್ದು, ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆಗಳನ್ನು ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ. ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಅವರ ಮಾಲೀಕತ್ವದಲ್ಲಿ ಆಭರಣ ಜ್ಯುವೆಲ್ಲರಿ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ಮಳಿಗೆಗಳಿವೆ. ಇನ್ನು ಉಡುಪಿಯಲ್ಲೂ ಹಲವು ಕಡೆ ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ.
ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಕರಾವಳಿಯ ಅನೇಕ ಭಾಗಗಳಲ್ಲಿ ಪ್ರಸಿದ್ಧ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ..

ಇನ್ನು ನಿನ್ನೆ( ಅಕ್ಟೋಬರ್ 30) ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದರು. ರಾಯಚೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ ಒಟ್ಟು 90 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications