ದಾಖಲೆ ಸಹಿತ ಸರ್ಕಾರದ ಸಾಧನೆ ತಿಳಿಸುವೆ: ಡಿಸೋಜಾ ಸವಾಲು
ಮಂಗಳೂರು, ಜೂನ್ 14: ಯಾವುದೇ ರೀತಿಯ ಮಾಹಿತಿ ಇಲ್ಲದೆ ಸರ್ಕಾರದ ವಿರುದ್ಧ ವೃಥಾ ಆರೋಪ ಮಾಡುತ್ತಿರುವ ಬಿಜೆಪಿ, ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲು ವಿಫಲವಾಗಿದೆ. ಮಾಹಿತಿ ಇಲ್ಲದೆ ಆರೋಪಗಳನ್ನು ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಮಾಹಿತಿ ಇಲ್ಲದೆ ಆರೋಪ ಮಾಡಿ ಜನರನ್ನು ದಾರಿ ತಪ್ಪಿಸುವ ಬದಲು ಅಭಿವೃದ್ಧಿ ಬಗ್ಗೆ ನನ್ನ ಜತೆ ಚರ್ಚೆಗೆ ಬರಲಿ. ರಾಜ್ಯ ಸರಕಾರದ ಸಾಧನೆಗಳನ್ನು ನಾನು ದಾಖಲೆ ಸಹಿತ ಅವರಿಗೆ ತಿಳಿಸುವೆ ಎಂದು ಸವಾಲು ಹಾಕಿದರು.
ಬಿಪಿಎಲ್ ಪಡಿತರ ಚೀಟಿ ದೊರಕಿಲ್ಲ ಎಂಬುದಾಗಿ ರಾಜ್ಯ ಸರಕಾರದ ವಿರುದ್ಧ ಶೋಭಾ ಕರಂದ್ಲಾಜೆ ವ್ಯಕ್ತಪಡಿಸುತ್ತಿರುವ ಆಕ್ರೋಶ ವಾಸ್ತವದಲ್ಲಿ ಕೇಂದ್ರ ಸರಕಾರದ ವಿರುದ್ಧವಾಗಿದೆ. ಕೇಂದ್ರದಲ್ಲಿ ಮಂತ್ರಿ ಸ್ಥಾನ ದೊರೆಯದೆ ಹತಾಶರಾಗಿರುವ ಅವರು ಈ ರೀತಿ ರಾಜ್ಯ ಸರಕಾರದ ವಿರುದ್ಧ ತಮ್ಮ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಟೀಕಿಸಿದರು.

ರೈತರ ಸಾಲ ಮನ್ನಾ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ಬ್ಯಾಂಕ್‌ಗಳ ಬೆಳೆ ಸಾಲಕ್ಕೆ ಸಂಬಂಧಿಸಿ 16.73 ಕೋಟಿ ರೂಪಾಯಿ ಬಿಡುಗಡೆಯಾಗಬೇಕಾಗಿದೆ. ಇದರಲ್ಲಿ 3710 ಫಲಾನುಭವಿಗಳಿಗೆ ಈಗಾಗಲೇ 10.73 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.












Click it and Unblock the Notifications