ಉಪವಾಸ ಸತ್ಯಾಗ್ರಹದ ಬಗ್ಗೆ ಸ್ಪಷ್ಟಪಡಿಸಿದ ಜನಾರ್ಧನ ಪೂಜಾರಿ
ಮಂಗಳೂರು, ಫೆಬ್ರವರಿ 04: ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಇಂದು ಸೋಮವಾರ ಸಂಜೆಯಿಂದ ಕುದ್ರೋಳಿ ದೇವಸ್ಥಾನದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಿದ್ದೇನೆ ಎಂದು ಹೇಳಿಕೆ ನೀಡಿದ್ದರು.
ಆದರೆ ಜನಾರ್ಧನ ಪೂಜಾರಿ ನಿರ್ಧಾರದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಾಳೆ ಮಂಗಳವಾರ ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಉಪವಾಸದ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.
ಸಂಜೆಯೊಳಗೆ ಪ್ರಕರಣ ಇತ್ಯರ್ಥ ಮಾಡದಿದ್ರೆ ಸಂಜೆ ಆರು ಗಂಟೆಯಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಪೂಜಾರಿ ತಿಳಿಸಿದ್ದರು.

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿದ ಅವರು ಮೋದಿ ದೇಶಕ್ಕೆ ಶನಿಯಾಗಿದ್ದಾರೆ. ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ರಕ್ತಪಾತವಾಗುತ್ತಿದೆ. ದೇಶದಲ್ಲಿ ಯಾರಿಗೂ ರಕ್ಷಣೆ ಸಿಗುತ್ತಿಲ್ಲ. ಮೋದಿ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.












Click it and Unblock the Notifications