ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂಡಬಿದ್ರೆಯಿಂದ ಉದ್ಯಮಿ ಜೀವನ್ ಶೆಟ್ಟಿ ಕಣಕ್ಕಿಳಿಸಲು ಜೆಡಿಎಸ್ ತೀರ್ಮಾನ

|
Google Oneindia Kannada News

ಮಂಗಳೂರು, ಏಪ್ರಿಲ್ 19: ಮುಂಬರುವ ವಿಧಾನಸಭಾ ಚುನಾವಣೆ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿಯ ಹೋರಾಟಕ್ಕೆ ವೇದಿಕೆಯಾಗಲಿದೆ . ಜಿಲ್ಲೆಯ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಈ ನಡುವೆ ಮೂಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಆಭ್ಯರ್ಥಿ ಕಣಕ್ಕಿಳಿಸಲಿದ್ದು ಇಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮೂಲ್ಕಿ ಮೂಡಬಿದ್ರೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜೀವನ್ ಶೆಟ್ಟಿ ಆಯ್ಕೆಯಾಗಿದ್ದರೆ. ಈ ಹಿಂದೆ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಿಂದ ಮಾಜಿ ಸಚಿವ ಅಮರನಾಥ್ ಶೆಟ್ಟಿ ಸ್ಪರ್ಧಿಸುತ್ತಿದ್ದರು. ಆದರೆ ಈ ಬಾರಿ ಅಮರನಾಥ ಶೆಟ್ಟಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಕಾರಣ ಮುಲ್ಕಿಯ ಖ್ಯಾತ ಉದ್ಯಮಿ ಜೀವನ್ ಶೆಟ್ಟಿ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದಾರೆ.

JDS announced Jeevan Shetty as candidate for Mulky Moodbidre constituency

ವಾಸ್ತು ಪ್ರಕಾರ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಜೀವನ್ ಶೆಟ್ಟಿ , ವಾಣಿಜ್ಯ, ವಸತಿ, ಹೋಟೆಲ್ ಸಂಕಿರ್ಣ ಸೇರಿದಂತೆ ದೇವಾಲಯಗಳ ನಿರ್ಮಾಣದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಈ ಕ್ಷೇತ್ರದಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಅಭಯಚಂದ್ರ ಜೈನ್ ಹಾಗೂ ಬಿಜೆಪಿ ಉಮಾನಾಥ್ ಕೋಟ್ಯಾನ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಆದರೆ ಈ ಎರಡು ಪಕ್ಷಗಳಲ್ಲಿ ಕೆಲ ಮುಖಂಡರು ಬಂಡಾಯದ ಬಾವುಟ ಹಾರಿಸಿದ್ದಾರೆ. ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್ಎಸ್ ಯುಐ ಮುಖಂಡರು ಬಂಡಾಯವೆದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಯಿಂದ ಉಮಾನಾಥ್ ಕೋಟ್ಯಾನ್ ಅವರಿಗೆ ಟಿಕೆಟ್ ನೀಡಿರುವುದರಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದು ಮುಲ್ಕಿ-ಮೂಡಬಿದ್ರೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ.

ಕಾಂಗ್ರೆಸ್ ಹಾಗು ಬಿಜೆಪಿ ಪಕ್ಷದಲ್ಲಿರುವ ಬಂಡಾಯ, ಗೊಂದಲದ ಸ್ಥಿತಿಯನ್ನು ಜೆಡಿಎಸ್ ಯಾವ ರೀತಿ ಬಳಸಿಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

English summary
Karnataka Assembly election 2018 : JDS announced Jeevan Shetty as candidate for Mulky Moodbidre constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X