ಮೂಡಬಿದ್ರೆಯಲ್ಲಿ ಹಳೆ ನಿಷ್ಠಾವಂತ ಅಮರನಾಥ್ ಶೆಟ್ಟಿಗೆ ಜೆಡಿಎಸ್ ಟಿಕೆಟ್

ಮಂಗಳೂರು, ಏಪ್ರಿಲ್ 20: ಮಹತ್ವದ ಬೆಳವಣಿಗೆಯೊಂದರಲ್ಲಿ ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಹಳೆ ನಿಷ್ಠಾವಂತ ಮುಖಂಡ ಅಮರನಾಥ್ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ.
ಈ ಮೂಲಕ ಮುಲ್ಕಿ - ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಪ್ರಬಲ ಸ್ಪರ್ಧೆ ನೀಡಲು ತಂತ್ರ ರೂಪಿಸಿದೆ. ಈ ಹಿನ್ನೆಲೆಯಲ್ಲಿ ತ್ರಿಕೋನ ಸ್ಪರ್ಧೆಗೆ ವೇದಿಗೆ ಸಿದ್ದವಾಗಿದೆ.

ಮೂಲ್ಕಿ ಮೂಡಬಿದ್ರೆ ಕ್ಷೇತ್ರ ದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮುಲ್ಕಿಯ ಉದ್ಯಮಿ ಜೀವನ್ ಶೆಟ್ಟಿ ಅವರನ್ನು ಕಣಕ್ಕಿಳಿಸಲು ನಿನ್ನೆ ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದರು. ಆದರೆ ಇಂದು ನಡೆದ ಮಹತ್ವದ ಬೆಳೆವಣಿಗೆಯಲ್ಲಿ ತನ್ನ ಹಳೆಯ ಪ್ರಭಾವಿ ಮುಖಂಡ ಅಮರನಾಥ್ ಶೆಟ್ಟಿ ಅವರನ್ನೇ ಕಣಕ್ಕಿಳಿಸಲು ಜೆಡಿಎಸ್ ತೀರ್ಮಾನಿಸಿದೆ.

JDS announces Amarnath Shetty as their candidate for Moodbidre

ಈ ಹಿಂದೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದಿಂದ ಮಾಜಿ ಸಚಿವ ಅಮರನಾಥ್ ಶೆಟ್ಟಿ ಸ್ಪರ್ಧಿಸುತ್ತಿದ್ದರು. ಇಲ್ಲಿಂದಲೇ ಗೆದ್ದು ಅವರು ಸಚಿವರೂ ಆಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಗೆ ತಕ್ಕಮಟ್ಟಿಗೆ ಸ್ವಲ್ಪವಾದರೂ ನೆಲೆ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಅಮರನಾಥ ಶೆಟ್ಟಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಮೂಲ್ಕಿಯ ಖ್ಯಾತ ಉದ್ಯಮಿ ಜೀವನ್ ಶೆಟ್ಟಿ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದರು.

ಆದರೆ ಅಮರನಾಥ್ ಶೆಟ್ಟಿ ಅವರ ಮನವೊಲಿಸುವಲ್ಲಿ ಜೆಡಿಎಸ್ ವರಿಷ್ಠರು ಸಫಲರಾಗಿದ್ದು ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಪ್ರಬಲ ಹೋರಾಟ ನೀಡಲು ತೀರ್ಮಾನಿಸಿದ್ದಾರೆ.

ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಯಚಂದ್ರ ಜೈನ್ ಹಾಗೂ ಬಿಜೆಪಿ ಉಮಾನಾಥ್ ಕೋಟ್ಯಾನ್ ಅವರನ್ನು ಕಣಕ್ಕಿಳಿಸಿದೆ. ಆದರೆ ಈ ಎರಡು ಪಕ್ಷಗಳಲ್ಲಿ ಕೆಲ ಮುಖಂಡರು ಬಂಡಾಯದ ಬಾವುಟ ಹಾರಿಸಿದ್ದಾರೆ. ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಮುಖಂಡರು ಹಾಗು ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್ಎಸ್ ಯುಐ ಮುಖಂಡರು ಬಂಡಾಯವೆದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯಿಂದ ಉಮಾನಾಥ್ ಕೋಟ್ಯಾನ್ ಅವರಿಗೆ ಟಿಕೆಟ್ ನೀಡಿರುವುದರಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಜಗದೀಶ್ ಅಧಿಕಾರಿ ಅವರ ಮನವೊಲಿಸುವಲ್ಲಿ ಬಿಜೆಪಿ ನಾಯಕರು ಸಫಲರಾಗಿದ್ದಾರೆ. ಚುನಾವಣೆಯಲ್ಲಿ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಜಗದೀಶ್ ಅಧಿಕಾರಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+