ಮಂಗಳೂರಿನಲ್ಲಿ ಚಾಕು ಇರಿತದಿಂದ ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿ ಸಾವು
ಚಾಕು ಇರಿತದಿಂದ ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು, ಫೆಬ್ರವರಿ, 03: ಮಂಗಳೂರಿನ ಹಂಪನಕಟ್ಟೆ ಮಿಲಾಗ್ರಿಸ್ ಬಳಿಯ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿ ಚಾಕು ಇರಿತದಿಂದ ಸಾವನ್ನಪ್ಪಿದ್ದಾನೆ. ಮೃತನನ್ನು ಅತ್ತಾವರ ಮೂಲದ ರಾಘವೇಂದ್ರ (54) ಎಂದು ಗುರುತಿಸಲಾಗಿದೆ. ಆದರೆ ದಾಳಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಜ್ಯುವೆಲ್ಲರಿ ಅಂಗಡಿಯ ಕೆಲಸದ ಸಿಬಂದಿ ರಾಘವೇಂದ್ರಗೆ ಚಾಕು ಇರಿದ ಘಟನೆ ಶುಕ್ರವಾರ (ಫೆಬ್ರವರಿ 03) ಮಧ್ಯಾಹ್ನ ನಡೆದಿದೆ. ಕೂಡಲೇ ಗಾಯಗೊಂಡಿದ್ದ ರಾಘವೇಂದ್ರರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೂ ಕೂಡ ಚಿಕಿತ್ಸೆ ಫಲಕಾರೊಯಾಗದೇ ಅವರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಘಟನೆ ವೇಳೆ ಜ್ಯುವೆಲ್ಲರಿ ಅಂಗಡಿಯಲ್ಲಿ ಒಬ್ಬರೇ ಇದ್ದರೆನ್ನುವ ಮಾಹಿತಿ ತಿಳಿದುಬಂದಿದೆ. ಅಂಗಡಿ ಮಾಲಕರು ಊಟ ಮಾಡಿ ವಾಪಸ್ ಆದಾಗ ಘಟನೆ ಗಮನಕ್ಕೆ ಬಂದಿದೆ ಎನ್ನಲಾಗಿದೆ. ಸಿಸಿ ಕ್ಯಾಮೆರಾದಲ್ಲಿ ಕೃತ್ಯ ದಾಖಲಾಗಿರುವ ಸಾಧ್ಯತೆಯಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಲೇ ಇದ್ದಾರೆ. ಈ ವೇಳೆ ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವ ದೃಶ್ಯ ಸಿಸಿ ಕೆಮೆರಾದಲ್ಲಿ ದಾಖಲಾಗಿದೆ. ನಂತರ ಸ್ಥಳಕ್ಕೆ ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಫಾಝಿಲ್ ತಂದೆಯಿಂದ ಪ್ರಚೋಧನಕಾರಿ ಹೇಳಿಕೆ
ತುಮಕೂರು ಹಾಗೂ ಉಳ್ಳಾಲದಲ್ಲಿ ಭಜರಂಗದಳದ ನೇತೃತ್ವದಲ್ಲಿ ಶೌರ್ಯ ಯಾತ್ರೆ ನಡೆದಿದ್ದು, ಈ ವೇಳೆ ಸುರತ್ಕಲ್ ಫಾಝಿಲ್ ಹತ್ಯೆಯ ರೂವಾರಿ ತಾವೇ ಎಂದು ಭಜರಂಗದಳದ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಬಹಿರಂಗ ಹೇಳಿಕೆ ನೀಡಿದ್ದರು. ಇದೀಗ ಶರಣ್ ಪಂಪ್ ವೆಲ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಫಾಝಿಲ್ ತಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ನೀಡುವಂತೆ ಫಾಝಿಲ್ ತಂದೆಗೆ ಸೂಚನೆ ನೀಡಿದ್ದರು. ಅಲ್ಲದೆ ಪ್ರಕರಣದ ಬಗ್ಗೆ ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.
ದೂರು ನೀಡಿದ ಫಾಝಿಲ್ ತಂದೆ ಉಮರ್ ಫಾರೂಕ್ ಮಾತನಾಡಿ, "ಶರಣ್ ಪಂಪ್ ವೆಲ್ ತನ್ನ ಪುತ್ರನ ಹತ್ಯೆಯನ್ನು ಸಂಭ್ರಮಿಸಿದ್ದಾನೆ. ಎಂಟು ಮಂದಿ ಓರ್ವನನ್ನು ಹತ್ಯೆ ಮಾಡಿದ್ದಾರೆ. ಅದು ನಿಜವಾದ ಶೌರ್ಯ ಅಲ್ಲ, ಹೇಡಿತನವಾಗಿದೆ. ಶರಣ್ ಪಂಪ್ ವೆಲ್‌ಗೆ ತಾಕತ್ ಇದ್ದಲ್ಲಿ ನಾನು ಒಬ್ಬನೇ ಬರುತ್ತೇನೆ. ಆಗ ನನ್ನೊಂದಿಗೆ ಕಾದಾಡಲಿ, ನಾನು ನೋಡಿಕೊಳ್ಳುತ್ತೇನೆ. ಹಿಂದೂ ಬೇರೆ, ಹಿಂದುತ್ವ ಬೇರೆ. ಹಿಂದೂಗಳು ಒಳ್ಳೆಯವರು. ಆದರೆ ಹಿಂದುತ್ವದಲ್ಲಿ ಇರುವವರು ಹಣ ತೆಗೆದುಕೊಂಡು ಕೃತ್ಯ ಮಾಡುವವರಾಗಿದ್ದಾರೆ. ಈ ಬಗ್ಗೆ ಎಡಿಜಿಪಿಗೂ ಮನವಿ ಮಾಡಿದ್ದೇನೆ. ಪೊಲೀಸರು ಶರಣ್ ಪಂಪ್ ವೆಲ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಬಹುದಿತ್ತು," ಎಂದು ಹೇಳಿದ್ದರು.
A masked man stabbed a jewelry store employee to death near Balmatta in Mangaluru on Friday noon. Deceased is identified as Raghavendra(54) from Attavar. Reason for the attack is not known yet @XpressBengaluru @vinndz_TNIE @ramupatil_TNIE @compolmlr @karkalasunil pic.twitter.com/8kGNE9grQL
— Divya Cutinho_TNIE (@cutinha_divya) February 3, 2023
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications