ಕಾವ್ಯ ನಿಗೂಢ ಸಾವಿನ ಪ್ರಕರಣ: 'ಜಿಲ್ಲಾ ಬಂದ್'ಗೆ ಕರೆ ನೀಡಲು ಚಿಂತನೆ

ಮಂಗಳೂರು, ಸೆಪ್ಟೆಂಬರ್ 5: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಲು 'ಜಸ್ಟಿಸ್ ಫಾರ್ ಕಾವ್ಯ' ಹೋರಾಟ ಸಮಿತಿ ನಿರ್ಧರಿಸಿದೆ.

ಈ ಕುರಿತು ಬುಧವಾರ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಮಹತ್ವದ ಸಭೆ ಕರೆಯಲಾಗಿದೆ. 'ಜಸ್ಟಿಸ್ ಫಾರ್ ಕಾವ್ಯ' ಹೋರಾಟ ಸಮಿತಿಯಲ್ಲಿ 40 ಸಂಘಟನೆಗಳಿದ್ದು ಸಪ್ಟೆಂಬರ್ 6 ರಂದು ಬುಧವಾರ ನಗರದ ಆರ್ಯ ಸಮಾಜದಲ್ಲಿ ಜಿಲ್ಲಾ ಬಂದ್ ಕರೆ ನೀಡುವ ಕುರಿತು ತೀರ್ಮಾನ ಕೈಗೊಳ್ಳಲು ಸಭೆ ಕರೆಯಲಾಗಿದೆ .

'Justice for Kavya' forum plans for Dakshina Kannada district bandh on Sep 16

ಕಾವ್ಯ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸ್ ಇಲಾಖೆ ದಾಖಲೆಗಳ ಮೂಲಕ ಸತ್ಯಾಂಶ ಬಯಲುಗೊಳಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿ ಸೆಪ್ಟೆಂಬರ್ 16 ರಂದು ಸ್ವಯಂ ಪ್ರೇರಿತ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡುವ ಸಂಭವವಿದೆ ಎಂದು ಸಮಿತಿಯ ದಿನಕರ್ ಶೆಟ್ಟಿ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಎಲ್ಲಾ 40 ಸಂಘಟನೆಗಳ ಮುಖಂಡರಿಗೆ ಸಭೆಗೆ ಆಹ್ವಾನಿಸಲಾಗಿದೆ. ಬುಧವಾರ ಆರ್ಯ ಸಮಾಜದಲ್ಲಿ ನಡೆಯಲಿರುವ ಸಭೆಯಲ್ಲಿ ಬಂದ್ ಕುರಿತು ಮಹತ್ವದ ನಿರ್ಧಾರ ಹೊರಬೀಳಲಿದೆ .

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+