ಮಂಗಳೂರು ವಿವಿ ಕುಲಸಚಿವರಾಗಿ ಕೆ. ರಾಜು ಮೊಗವೀರ ಅಧಿಕಾರ ಸ್ವೀಕಾರ
ಮಂಗಳೂರು, ಏಪ್ರಿಲ್ 27: ಹಿರಿಯ ಕೆ.ಎ.ಎಸ್ ಅಧಿಕಾರಿ ಕೆ. ರಾಜು ಮೊಗವೀರ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ (ಆಡಳಿತ) ಸೋಮವಾರ ಅಧಿಕಾರ ವಹಿಸಿಕೊಂಡರು. ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ನೂತನ ಕುಲಸಚಿವರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು.
Recommended Video
ಈ ಸಂದರ್ಭದಲ್ಲಿ, ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಎಲ್ ಧರ್ಮ, ಹಣಕಾಸು ಅಧಿಕಾರಿ ಬಿ. ನಾರಾಯಣ, ವಿಶೇಷಾಧಿಕಾರಿಗಳಾದ ಎಂ. ಜಯಶಂಕರ್, ಡಾ. ನಾಗಪ್ಪ ಗೌಡ, ಉಪ ಕುಲಸಚಿವ ಹುಕ್ರಪ್ಪ ನಾಯ್ಕ್, ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಪ್ರೊ. ನವೀನ್ ಕುಮಾರ್ ಎಸ್.ಕೆ ಮೊದಲಾದವರು ಉಪಸ್ಥಿತರಿದ್ದರು.

ಅಧಿಕಾರ ಸ್ವೀಕರಿಸಿದ ಬಳಿಕ ನೂತನ ಕುಲಸಚಿವರು ಅಧಿಕಾರಿಗಳ ಅನೌಪಚಾರಿಕ ಸಭೆ ನಡೆಸಿ ವಿಶ್ವವಿದ್ಯಾನಿಲಯದ ನೂತನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕೊವಿಡ್-19 ನಂತರದ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ತಮ್ಮ ವಿಭಾಗದ ಕೆಲಸಗಳ ಆದ್ಯತಾ ಪಟ್ಟಿ ಮಾಡಿಕೊಡಲು ಸೂಚಿಸಿದರು. ಎಲ್ಲರ ಸಹಕಾರದೊಂದಿಗೆ ತಮ್ಮ ಆಸಕ್ತಿಯ ಮಳೆ ನೀರು ಕೊಯ್ಲು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರುವ ಇಚ್ಛೆ ವ್ಯಕ್ತಪಡಿಸಿದರು.

ಪರಿಚಯ: ಮೂಲತಃ ಕುಂದಾಪುರದವರಾದ ಕೆ. ರಾಜು ಮೊಗವೀರ, ಭಂಡಾರ್ಕರ್ಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಬಿ. ಎ ಶಿಕ್ಷಣ ಪೂರೈಸಿದ್ದಾರೆ. ʼಡೆಕ್ಕನ್ ಹೆರಾಲ್ಡ್ʼ ಪತ್ರಿಕೆಯ ಜಾಹಿರಾತು ವಿಭಾಗದಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದ ಇವರು, ಕೆಎಎಸ್ ಪೂರೈಸಿದ ಬಳಿಕ ಮಂಗಳೂರು ಸೇರಿದಂತೆ ಹಲವೆಡೆ ತಹಶೀಲ್ದಾರರಾಗಿ ಸೇವೆ ಸಲ್ಲಿಸಿದರು. ಶಿರಸಿಯ ಉಪ ಆಯುಕ್ತರಾಗಿ, ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾಗಿ (ಕಂದಾಯ) ಮತ್ತು ಸಮಗ್ರ ಶಿಕ್ಷಾ ಅಭಿಯಾನದ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications