ಮಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಇಬ್ಬರ ಬಂಧನ

ಮಂಗಳೂರಿನ ಪಂಪ್ ವೆಲ್ ಬಳಿ ಇರುವ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಠಾಣೆ ಪೊಲೀಸರು ಬಂದಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಮಂಗಳೂರು, ಫೆಬ್ರವರಿ. 21 : ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಠಾಣಾ ಪೊಲೀಸರು ಸೋಮವಾರ ರಾತ್ರಿ ನಗರದ ಪಂಪ್ ವೆಲ್ ನಲ್ಲಿರುವ ಲಾಡ್ಜ್ ವೊಂದರಲ್ಲಿ ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಬೋಳೂರಿನ ತರುಣ್ (32) ಹಾಗೂ ಲಾಡ್ಜ್ ಸಿಬ್ಬಂದಿ ವೇಣೂರಿನ ಮಹಮ್ಮದ್ ಅಲಿ (29) ಬಂಧಿತ ಆರೋಪಿಗಳು. ಬಂಧಿತರಿಂದ 5 ಮೊಬೈಲ್ ಹಾಗೂ 10,850 ರೂ. ನಗದು ವಶಪಡಿಸಿಕೊಂಡಿದ್ದಾರೆ. ಇನ್ನು ಇಬ್ಬರು ಮಹಿಳೆಯರನ್ನು ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ.[ಮಂಗಳೂರಲ್ಲಿ ಆನ್ ಲೈನ್ ವೇಶ್ಯಾವಾಟಿಕೆ : ಐವರ ಬಂಧನ]

Kadri Police bust prostitution racket, two arrested in Mangaluru

ಈ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಎಸಿಪಿ ಉದಯನಾಯಕ್ ಅವರ ಮಾರ್ಗದರ್ಶನದಲ್ಲಿ ಕದ್ರಿ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ.[ಮಂಗಳೂರಿನಲ್ಲಿ ವೆಬ್ ಸೈಟ್ ಮೂಲಕ ವೇಶ್ಯಾವಾಟಿಕೆ, ಇಬ್ಬರು ಪೊಲೀಸ್ ವಶಕ್ಕೆ]

ದಾಳಿಯ ಸಂದರ್ಭದಲ್ಲಿ ಇಬ್ಬರು ಮಹಿಳೆಯನ್ನು ರಕ್ಷಿಸಲಾಗಿದ್ದು, ಲಾಡ್ಜ್ ನ ಮಾಲೀಕ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+