ಪುತ್ತೂರು: ಬಿಗ್‌ಬಾಸ್‌ನಲ್ಲಿ ಹುಲಿ ಕುಣಿತದ ಮೂಲಕ ಗಮನ ಸೆಳೆದಿದ್ದ "ಕಲ್ಲೇಗ ಟೈಗರ್ಸ್‌" ಮುಖ್ಯಸ್ಥನ ಬರ್ಬರ ಹತ್ಯೆ

ಮಂಗಳೂರು, ನವೆಂಬರ್‌, 07: ಕಳೆದ ಬಿಗ್‌ ಬಾಸ್ ಸೀಸನ್‌ನಲ್ಲಿ‌ ಹುಲಿ ಕುಣಿತ ಮಾಡಿ ಗಮನ ಸೆಳೆದಿದ್ದ ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್‌ನಲ್ಲಿ ನಡೆದಿದೆ.

ಪುತ್ತೂರಿನ "ಕಲ್ಲೇಗ ಟೈಗರ್ಸ್‌" ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಹತ್ಯೆಯಾದ ಯುವಕನಾಗಿದ್ದಾನೆ. ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನನ್‌ನಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿದ್ದು, ಹತ್ಯೆಗೈದ ಬನ್ನೂರು ನಿವಾಸಿ ಮನೀಷ್ ಚೇತು ಎಂಬ ಆರೋಪಿ ಪುತ್ತೂರು ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಮತ್ತೋರ್ವ ಆರೋಪಿ ತಲೆಮಲೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Kallega Tigers team head murder in puttur

ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದಿತ್ತು. ಈ ವೇಳೆ ಎರಡು ಸಾವಿರ ನೀಡುವ ವಿಚಾರದಲ್ಲಿ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ಮಾತುಕತೆ ವಿಕೋಪಕ್ಕೆ ತಿರುಗಿದ್ದು, ಕೊನೆಗೆ ಮೂರಕ್ಕೂ ಅಧಿಕ ಮಂದಿಯ ತಂಡ ಅಕ್ಷಯ್‌ನನ್ನು ಅಟ್ಟಾಡಿಸಿ ತಲವಾರಿನಿಂದ ದಾಳಿ ಮಾಡಿ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಈ ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸದ್ಯ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+