ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ
ಮಂಗಳೂರು, ಮೇ 29 : ಜಾಗ್ವಾರ್ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅವರು ಇಂದು (ಸೋಮವಾರ) ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಇದೆ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು ಮತ್ತು ನಿಖಿಲ್ ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಅವರಲ್ಲಿ ಅಂಚಿಕೊಂಡರು.[ಮಂಡ್ಯ ಜನತೆ ರಮ್ಯಾರನ್ನು ಕ್ಷಮಿಸುವುದಿಲ್ಲ: ನಿಖಿಲ್]

ಜೂನ್ 5ರಂದು ನಿಖಿಲ್ ಕುಮಾರ್ ಅವರ ಎರಡನೇ ಸಿನಿಮಾ ಮುಹೂರ್ತ ನಡೆಯಲಿದೆ. ಹೊಸ ಚಿತ್ರಕ್ಕೆ ಹೊಯ್ಸಳ ಅನ್ನೋ ಟೈಟಲ್ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ನಿಖಿಲ್ ಧರ್ಮಸ್ಥಳಕ್ಕೆ ತೆರಳಿ ದೇವರ ಆಶೀರ್ವಾದ ಪಡೆದರು.
ಚೇತನ್ ಕುಮಾರ್ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ನಿಖಿಲ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣವಾಗಲಿದೆ. ಈ ಚಿತ್ರದಲ್ಲಿ ನಿಖಿಲ್ ಗೆ ನಾಯಕಿಯಾಗಿ ರಿಯಾ ನಲವಾಡೆ ಅಭಿನಯಿಸುತ್ತಿದ್ದು, ಜತೆಗೆ ಶೋಭರಾಜ್, ಸಾಧು ಕೋಕಿಲ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಚಿತ್ರಕ್ಕೆ ಶ್ರೀಷ ಕೂದುವಳ್ಳಿ ಛಾಯಾಗ್ರಹಣ ಮಾಡಿದರೆ, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದಾರೆ.












Click it and Unblock the Notifications