ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಭೇಟಿ
ಮಂಗಳೂರು, ಮಾರ್ಚ್. 24 : ಇಲ್ಲಿನ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಶಾಲೆ, ಕಾಲೇಜು ಮತ್ತು ಗೋ ಶಾಲೆಗೆ ಕನ್ನಡ ಚಿತ್ರರಂಗದ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಗುರುವಾರ ಭೇಟಿ ನೀಡಿದರು.
ಈ ವೇಳೆ ಪ್ರತಿಕ್ರಿಯಿಸಿರುವ ಅವರು, ಮಾನವೀಯ ಮೌಲ್ಯಗಳನ್ನು ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳಸಿಕೊಂಡು ಬಂದಿರುವ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ನನಗೆ ತುಂಬಾ ಸಂತಸ ತಂದಿದೆ ಹರ್ಷ ಎಂದು ವ್ಯಕ್ತಪಡಿಸಿದರು.

ಶಿಸ್ತು, ಆಚಾರ, ವಿಚಾರ, ಸಂಸ್ಕೃತಿ, ನಮ್ಮತನ, ಜೀವನ ಪದ್ಧತಿಗೆ ಒತ್ತು ನೀಡುತ್ತಿರುವುದು ಇತರ ವಿದ್ಯಾ ಸಂಸ್ಥೆಗಳಿಗೆ ಮಾದರಿಯಾಗಿದೆ. ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಗಳನ್ನಿಟ್ಟುಕ್ಕೊಂಡು ವಿದ್ಯಾಭ್ಯಾಸ ಮಾಡಿದರೆ ಉತ್ತಮ ಜೀವನ ರೂಪಿಸಲು ಸಾಧ್ಯವಾಗಲಿದೆ ಎಂದರು.

ನಂತರ ಗೋಲ್ಡನ್ ಸ್ಟಾರ್ ಗಣೇಶ್ ಅವರು ಗೋ- ಶಾಲೆಗೇ ಭೇಟಿ ನೀಡಿ ಚಟುವಟಿಕೆ ವೀಕ್ಷಿಸಿದರು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಶ್ರೀರಾಮ ವಿದ್ಯಾಕೇಂದ್ರ ಸಂಚಾಲಕ ವಸಂತ ಮಾಧವ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications