Amit Shah: ಮತ್ತೆ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ, ಫೆ.11ಕ್ಕೆ ಪುತ್ತೂರಿನಲ್ಲಿ ಸಮಾವೇಶ
ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಅಧಿಕಾರ ಉಳಿಸಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ರಾಷ್ಟ್ರೀಯ ನಾಯಕರು ಸಾಥ್ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಈ ಬಾರಿ ದಕ್ಷಿಣ ಕನ್ನಡಕ್ಕೆ ದಂಡಯಾತ್ರೆ ಹೊರಟಿದ್ದಾರೆ.
ಮಂಗಳೂರು, ಫೆಬ್ರವರಿ. 03: ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಶತಪ್ರಯತ್ನ ನಡೆಸುತ್ತಿರುವ ಬಿಜೆಪಿಗೆ ರಾಷ್ಟ್ರೀಯ ನಾಯಕರು ಸಾಥ್ ನೀಡಿದ್ದಾರೆ. ಮತ್ತೆ ಮತ್ತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಸರ್ಕಾರದ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ.
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಈ ತಿಂಗಳ 11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಪುತ್ತೂರಿನಲ್ಲಿ ನಡೆಯಲಿರುವ ಸಹಕಾರಿ ಸಮಾವೇಶದಲ್ಲಿ ಭಾಗವಹಿಸಲಿದ್ದು, ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ) ನ ಸುವರ್ಣ ಮಹೋತ್ಸವದ ಅಂಗವಾಗಿ ಪುತ್ತೂರಿನಲ್ಲಿ ಸಮಾವೇಶ ನಡೆಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಫೆಬ್ರವರಿ 11 ರ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಕ್ಯಾಂಪ್ಕೊ ಮೂಲಗಳು ತಿಳಿಸಿವೆ.

ಗೃಹ ಸಚಿವರು ಪುತ್ತೂರಿನ ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್‌ನ ಚಾಕೊಲೇಟ್ ಕಾರ್ಖಾನೆಗೂ ಭೇಟಿ ನೀಡಲಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಈಗಾಗಲೇ ತಿಂಗಳಲ್ಲಿ ಎರಡೇರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿರುವ ಗೃಹ ಸಚಿವ ಅಮಿತ್ ಶಾ, ದಕ್ಷಿಣ ಕನ್ನಡಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.

ಇನ್ನು ಪುತ್ತೂರು ತಾಲೂಕಿನಲ್ಲಿ ಬಿಜೆಪಿ ಸಂಕಲ್ಪ ಅಭಿಯಾನ ನಡೆಯುತ್ತಿದೆ. ಕ್ಯಾಂಪ್ಕೊ ಸುವರ್ಣ ಮಹೋತ್ಸವಕ್ಕೆ ಬರುವ ಅಮಿತ್ ಶಾ, ಪ್ರಚಾರದ ಭಾಗವಾಗಿ ಪುತ್ತೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿಯೂ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.












Click it and Unblock the Notifications