ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವಾಸಮತ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ

By ಕಿರಣ್ ಸಿರ್ಸೀಕರ್
|
Google Oneindia Kannada News

ಮಂಗಳೂರು, ಮೇ 19: ರಾಜ್ಯದ ನೂತನ ಸರಕಾರ ರಚನೆಗೆ ವಿಶ್ವಾಸಮತ ಯಾಚನೆಯ ಹೈಡ್ರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ರಾಜ್ಯದ ನೂತನ ಮುಖ್ಯಮಂತ್ರಿ ಬಿ ಎಸ್ .ಯಡಿಯೂರಪ್ಪ ಅವರು ಬಹುಮತ ಸಾಬೀತು ಪಡಿಸುವ ವಿಶ್ವಾಸದಲ್ಲಿದ್ದಾರೆ. ಈ ನಡುವೆ ಬಿಜೆಪಿ ಕಾರ್ಯಕರ್ತರು ಬಹುಮತ ಸಾಬೀತು ಯಶಸ್ವಿಯಾಗಲಿ ಎಂದು ದೇವರ ಮೊರೆ ಹೋಗಿದ್ದಾರೆ.

ಕರ್ನಾಟಕ ವಿಶ್ವಾಸಮತ LIVE: ವಿಧಾನಸೌಧದ ಮೇಲೆ ಎಲ್ಲರ ಕಣ್ಣುಕರ್ನಾಟಕ ವಿಶ್ವಾಸಮತ LIVE: ವಿಧಾನಸೌಧದ ಮೇಲೆ ಎಲ್ಲರ ಕಣ್ಣು

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ಬಹುಮತ ಸಾಬೀತುಪಡಿಸುವಂತಾಗಬೇಕು ಎಂದು ಬಿಜೆಪಿ ಕಾರ್ಯಕರ್ತರು ಪುತ್ತೂರಿನಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದರು. ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಶನಿವಾರ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.

karnataka assembly floor test 2018: BJP workers offered special pooja in temple

ರಾಜ್ಯದ ಜನತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿ ಬಿಜೆಪಿಗೆ ಬಹುಮತ ನೀಡಿದ್ದಾರೆ. ಆದರೆ ಇದೀಗ ಜೆಡಿಎಸ್ ಹಾಗೂ ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯಲು ಹವಣಿಸುತ್ತಿವೆ.ಇದು ರಾಜ್ಯದ ಜನತೆಗೆ ಮಾಡಿದ ದ್ರೋಹವಾಗಿದ್ದು, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಕಾರ್ಯಕರ್ತರು ದೇವರ ಮುಂದೆ ಪ್ರಾರ್ಥನೆ ಮಾಡಿದ್ದಾರೆ.

English summary
karnataka assembly floor test 2018: New chief minister B S Yediyurappa facing floor test today. He has to prove majority in the floor . For successful floor test BJP workers offered special pooja in Putturu Mahalingeswara temple
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X