ಮಂಗಳೂರಿನಲ್ಲಿ ಕರ್ನಾಟಕ ಬಂದ್ ಬಿಸಿ ಇಲ್ಲ
ಮಂಗಳೂರು, ಜೂನ್ 12 : ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ ಆಗ್ರಹಿಸಿ ವಾಟಾಳ್ ನಾಗರಾಜ್ ಸೇರಿದಂತೆ ಇತರೆ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮಂಗಳೂರಿನಲ್ಲಿ ಬೆಂಬಲ ಸಿಕ್ಕಿಲ್ಲ.
ಬಂದ್‌ಗೆ ಕೆಲ ಸಂಘಟನೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿದರೂ, ಬಹುತೇಕ ಸಂಘಟನೆಗಳು ಬೆಂಬಲ ನೀಡದಿದ್ದರಿಂದ ಇಲ್ಲಿ ಯಾವುದೇ ರೀತಿಯಲ್ಲಿ ನಾಗರಿಕರಿಗೆ ಬಂದ್‌ನ ಬಿಸಿ ತಟ್ಟಿಲ್ಲ. ಖಾಸಗಿ, ಸರ್ಕರಿ ಬಸ್‌ಗಳು ಸೇರಿದಂತೆ ಎಲ್ಲಾ ವಾಹನಗಳ ಸಂಚಾರ ಯಾಥಾಸ್ಥಿತಿಯಲ್ಲಿದೆ. ಇನ್ನು ಶಾಲಾ, ಕಾಲೇಜು ಹಾಗೂ ಕಚೇರಿಗಳು ಸೇರಿದಂತೆ ಎಲ್ಲಾ ಸಂಸ್ಥೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.

ಕನ್ನಡ ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್, ರಾಜ್ಯ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಬೆಂಬಲ ನೀಡಲು ನಿರಾಕರಿಸಿವೆ.











Click it and Unblock the Notifications