ಕರ್ಣಾಟಕ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಪೊಳಲಿ ಜಯರಾಂ ಭಟ್ ನಿಧನ
ಮಂಗಳೂರು, ಆಗಸ್ಟ್, 09: ಕರ್ಣಾಟಕ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಪೊಳಲಿ ಜಯರಾಂ ಭಟ್ ಅವರು ಬುಧವಾರ (ಆಗಸ್ಟ್ 09) ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪೊಳಲಿ ಜಯರಾಂ ಭಟ್ (71) ಅವರು ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ಕುಸಿದಿದ್ದು, ತಕ್ಷಣ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಿಸಿದ್ದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಯರಾಂ ಭಟ್ ಅವರು ಮುಂಬೈನಲ್ಲಿ ಮಂಗಳವಾರ ಯುನಿವರ್ಸಲ್ ಸೋಂಪೋ ವಿಮಾ ಕಂಪನಿಯ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದು, ಇಂದು ಊರಿಗೆ ಮರಳುತ್ತಿದ್ದಾರೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಭಟ್ ಅವರು ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ಇವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು
ವಾಕಿಂಗ್ ತೆರಳಿದ ವೇಳೆ ಶಾಲಾ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್‌ನಲ್ಲಿ ಎಸ್ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ್ (15) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಈಕೆ ಸಿಎಂಎಸ್ ಅನಾಥಾಲಯದಲ್ಲಿ ವಾಯುವಿಹಾರ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ವೈದ್ಯರು ತಪಾಸಣೆಗೆ ಒಳಪಡಿಸಿದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ.
ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಮೃತಳ ತಾಯಿ ದೂರು ಕೊಟ್ಟಿದ್ದು, ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.
ಮೃತ ವಿದ್ಯಾರ್ಥಿನಿ ಫಿಲಿಶ್(15) ಮೂಲತಃ ಬೆಂಗಳೂರಿನ ನಿವಾಸಿಯಾಗಿದ್ದು, ತಂದೆ ನಿಧನರಾದ ಬಳಿಕ ಕ್ರೈಸ್ತ ಮಿಷನರಿಯೊಂದು ವ್ಯಾಸಂಗಕ್ಕಾಗಿ ಪಟ್ಟಣದ ಸಿಎಂಎಸ್ ಅನಾಥಾಲಯಕ್ಕೆ ತಂದು ಬಿಟ್ಟಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ ಮಾಹಿತಿ ನೀಡಿದ್ದಾರೆ.
ಬಾಲಕಿ ಆರೋಗ್ಯವಾಗಿದ್ದು ಧಿಡೀರ್ ಕುಸಿದು ಬಿದ್ದು ಹೃದಯಾಘಾತವಾಗಿರುವುದು ನಮಗೆಲ್ಲರಿಗೂ ಆಘಾತವಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ. ಮೃತ ಬಾಲಕಿಯ ಶವವನ್ನು ಪಟ್ಟಣದ ಶವಾಗಾರಕ್ಕೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಹಸ್ತಾಂತತರಿಸಲಾಗಿದೆ.












Click it and Unblock the Notifications