ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ; ತನಿಖೆಗೆ ಕಾಂಗ್ರೆಸ್ ಒತ್ತಾಯ
ಮಂಗಳೂರು, ಮೇ 29 : "ಪಿಪಿಇ ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಸರ್ ಖರೀದಿ ಬಗ್ಗೆ ಕರ್ನಾಟಕ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದರು.
Recommended Video
ಶುಕ್ರವಾರ ಮಂಗಳೂರಿನಲ್ಲಿ ಮಾತನಾಡಿದ ಸಲೀಂ ಅಹ್ಮದ್, "ವಿಧಾನಸಭೆಯ ಸ್ಪೀಕರ್ ಎಚ್. ಕೆ. ಪಾಟೀಲ್ ನೇತೃತ್ವದ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಈ ಕುರಿತು ತನಿಖೆ ನಡೆಸಲು ಅವಕಾಶ ನೀಡಬೇಕು" ಎಂದು ಆಗ್ರಹಿಸಿದರು.
"ಕೊರೊನಾ ವೈರಸ್ ಸೋಂಕಿನ ಸಂದರ್ಭದಲ್ಲಿ ಪಿಪಿಇ ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಸರ್ ಖರೀದಿಯಲ್ಲಿ ಹಣದ ದುರುಪಯೋಗ ಆಗಿದೆ. ಕರ್ನಾಟಕ ಸರ್ಕಾರ ಎಷ್ಟು ಹಣ ಖರ್ಚು ಮಾಡಿದೆ? ಎಂದು ಶ್ವೇತ ಪತ್ರ ಹೊರಡಿಸಬೇಕು" ಎಂದರು.

"ಇಂತಹ ವಿಪತ್ತಿನ ಸಂದರ್ಭದಲ್ಲಿ ಪ್ರತಿಪಕ್ಷವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದೆ. ಆದರೆ, ಸರ್ಕಾರ ಪ್ರತಿಪಕ್ಷಗಳ ಯಾವ ಸಲಹೆಯನ್ನೂ ಗಂಭೀರವಾಗಿ ಪರಿಗಣಿಸಿಲ್ಲ" ಎಂದು ಸಲೀಂ ಅಹ್ಮದ್ ದೂರಿದರು.
"ವಲಸೆ ಕಾರ್ಮಿಕರ ವಿಚಾರದಲ್ಲಿ ಕರ್ನಾಟಕ ಸರ್ಕಾರ ಯಾವುದೇ ಸರಿಯಾದ ಕ್ರಮ ಕೈಗೊಂಡಿಲ್ಲ. ಆಹಾರದ ಸೌಲಭ್ಯವಿಲ್ಲದೇ, ತವರು ರಾಜ್ಯಕ್ಕೆ ವಾಪಸ್ ತೆರಳಲು ಸರಿಯಾದ ಸಾರಿಗೆ ಸೌಕರ್ಯವಿಲ್ಲದೇ ಕಾರ್ಮಿಕರು ಪರದಾಡುತ್ತಿದ್ದಾರೆ" ಎಂದರು ಆರೋಪಿಸಿದರು.
"ಕೇಂದ್ರ ಸರ್ಕಾರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು. ಕೊರೊನಾ ಆಪತ್ತಿನ ಸಂದರ್ಭದಲ್ಲಿ 50 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನೀಡಬೇಕು" ಎಂದು ಸಲೀಂ ಅಹ್ಮದ್ ಒತ್ತಾಯಿಸಿದರು.












Click it and Unblock the Notifications