Rahul Gandhi: ಕಡಲ ನಗರಿ ಮಂಗಳೂರಿನಲ್ಲಿ ಐಸ್ ಕ್ರೀಮ್ ಸವಿದು ಗಮನ ಸೆಳೆದ ರಾಹುಲ್ ಗಾಂಧಿ
ಮಂಗಳೂರು, ಏಪ್ರಿಲ್, 28: ವಿಧಾನಸಭೆ ಚುನಾವಣೆ ಹಿನ್ನೆಲೆ ಮಂಗಳೂರಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು ಅಲ್ಲಿನ ಪ್ರಖ್ಯಾತ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್‌ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ.
ಮಂಗಳೂರಿನ ಲಾಲ್‌ಬಾಗ್‌ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್‌ಗೆ ಬಿಗಿ ಭದ್ರತೆಯೊಂದಿಗೆ ಕಾಂಗ್ರೆಸ್ ಮುಖಂಡರೊಂದಿಗೆ ಆಗಮಿಸಿ ರಾಹುಲ್ ಗಾಂಧಿ ಅವರು ಐಸ್ ಕ್ರೀಮ್ ಸವಿದು ಗಮನ ಸೆಳೆದಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್, ಕೆ.ಸಿ.ವೇಣುಗೋಪಾಲ್, ನಲಪಾಡ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಗೆ ಸಾಥ್ ನೀಡಿದರು.

ಅಲ್ಲದೆ ಐಸ್ ಕ್ರೀಮ್ ಪಾರ್ಲ್ ಬಳಿ ರಾಹುಲ್ ಗಾಂಧಿಯೊಂದಿಗೆ ಜನ ಸೆಲ್ಫಿಗೆ ಮುಗಿಬಿದ್ದ ಘಟನೆಯೂ ನಡೆದಿದೆ. ಈ ವೇಳೆ ಜನರ ಜೊತೆ ರಾಹುಲ್ ಗಾಂಧಿ ಅವರು ಸೆಲ್ಫಿಗೆ ಪೋಸ್ ನೀಡಿ ಗಮನ ಸೆಳೆದಿದ್ದಾರೆ.
ಐದನೇ ಭರವಸೆ ಘೋಷಿಸಿದ ರಾಹುಲ್ ಗಾಂಧಿ
ಇನ್ನು ಮಂಗಳೂರು ಕಾಂಗ್ರೆಸ್ ಸಮಾವೇಶದಲ್ಲಿ ಮಹಿಳೆಯರಿಗಾಗಿ ಕಾಂಗ್ರೆಸ್‌ನ ಐದನೇ ಭರವಸೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘೋಷಿಸಿದ್ದು, ರಾಜ್ಯಾದ್ಯಂತ ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣದ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಲ್ಲಿ ಈ ಯೋಜನೆ ಆರಂಭಿಸುತ್ತೇವೆ ಎಂದು ತಿಳಿಸಿದ್ದರು.
ನಮ್ಮ ನಾಲ್ಕು ಭರವಸೆಗಳನ್ನು ಸರ್ಕಾರ ಬಂದ ಮೊದಲ ದಿನದಲ್ಲೇ ಅನುಷ್ಠಾನ ಮಾಡುತ್ತೇವೆ. ಪ್ರಧಾನಿ ಮೋದಿಯವರಿಗೆ ಸ್ಪಷ್ಟವಾಗಿ ಹೇಳುತ್ತೇನೆ. ಕರ್ನಾಟಕದಲ್ಲಿ ನಾವು ಘೋಷಿಸಿದ ನಾಲ್ಕು ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತನ್ನಿ. ಒಂದೇ ಒಂದು ಭರವಸೆಯನ್ನು ಮೋದಿ ಅನುಷ್ಠಾನ ಮಾಡಿಲ್ಲ. ಬದಲಾಗಿ ಅದಾನಿಗೆ ವಿಮಾನ ನಿಲ್ದಾಣ, ಬಂದರುಗಳನ್ನು ನೀಡಿದ್ದಾರೆ. ಬಡವರಿಗೆ ನೀಡಿದ ಭರವಸೆಯನ್ನು ಅನುಷ್ಠಾನ ಮಾಡಲ್ಲ ಎಂದು ಕಿಡಿಕಾರಿದ್ದರು.
ಮಂಗಳೂರು ಜೊತೆ ನನಗೆ ಹಳೆಯ ಸಂಬಂಧ ಇದೆ. ಇಲ್ಲಿನ ಬಂದರನ್ನು ಇಂದಿರಾ ಗಾಂಧಿ ಮಾಡಿದ್ದರು. ಮಂಗಳೂರು ವಿಮಾನ ನಿಲ್ದಾಣ, ಕೈಗಾರಿಕೆಗಳು ಕೂಡಾ ಕಾಂಗ್ರೆಸ್ ಸರ್ಕಾರದ ಕೊಡುಗೆ. ಕರಾವಳಿಯ ಹೆಮ್ಮೆಯ ಬ್ಯಾಂಕ್ ಗಳನ್ನು ವಿಲೀನ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ಜಯಗಳಿಸಲಿದೆ. ಇದನ್ನು ಯಾರೂ ನಿಲ್ಲಿಸಲು ಸಾಧ್ಯವೇ ಇಲ್ಲ. ಕಾಂಗ್ರೆಸ್150 ಸೀಟುಗಳನ್ನು ಗೆಲ್ಲಲಿದೆ. ಬಿಜೆಪಿ 40% ಸರ್ಕಾರ ಹಾಗಾಗಿ ಅವರಿಗೆ 40 ಸೀಟು ಮಾತ್ರ ನೀಡಿ ಎಂದು ವ್ಯಂಗ್ಯವಾಡಿದ್ದರು.
ಕಳ್ಳತನದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ. ಭ್ರಷ್ಟಾಚಾರದ ಹಣದಲ್ಲಿ ಶಾಸಕರನ್ನು ಖರೀದಿ ಮಾಡಿದ್ದಾರೆ. ಬಿಜೆಪಿಗೆ ಕಳ್ಳತನ ಮಾಡುವುದು ಅಭ್ಯಾಸವಾಗಿದೆ. ಎಲ್ಲವನ್ನೂ ಕಳ್ಳತನ ಮಾಡೋದು ಇವರ ಹವ್ಯಾಸವಾಗಿದೆ. ಬಿಜೆಪಿ ಅಧ್ಯಕ್ಷ ಕರ್ನಾಟಕವನ್ನು ಮೋದಿ ಕೈಯಲ್ಲಿ ಕೊಡಿ ಅಂತಾ ಹೇಳುತ್ತಾರೆ. ಈಗಲೂ ಕರ್ನಾಟಕ ಬಿಜೆಪಿ ಕೈಯಲ್ಲೇ ಇದೆ. ಬಿಜೆಪಿಯವರು ಒಳ್ಳೆಯ ಅಭಿವೃದ್ಧಿಗಾಗಿ ಕರ್ನಾಟಕವನ್ನು ಕೊಡಿ ಅಂತಾ ಹೇಳುತ್ತಾರೆ. ಎಲ್ಲಾ ವಿಚಾರದಲ್ಲಿ 40% ಭ್ರಷ್ಟಾಚಾರ ನಡೆದಿದೆ ಎಂದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications