ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ ಮುನ್ನಡೆ, ಕಾಂಗ್ರೆಸ್ ಗೆ ಭಾರೀ ಹಿನ್ನಡೆ

By Sachhidananda Acharya
|
Google Oneindia Kannada News

ಮಂಗಳೂರು, ಮೇ 15: ದಕ್ಷಿಣ ಕನ್ನಡದಲ್ಲಿ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಜಿಲ್ಲೆಯ 8 ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ ಅಭ್ಯರ್ಥಿಗಳು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಜಿದ್ದಾಜಿದ್ದಿನಿಂದ ಕೂಡಿದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಜೀವ ಮಠಂದೂರು ಕಾಂಗ್ರೆಸಿನ ಶಕುಂತಳಾ ಶೆಟ್ಟಿ ವಿರುದ್ಧ 1,102 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಸುಳ್ಯ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕ ಎಸ್. ಅಂಗಾರ ಕಾಂಗ್ರೆಸಿನ ರಘು ವಿರುದ್ಧ 2034 ಮತಗಳಿಂದ ಮುಂದಿದ್ದಾರೆ.

LIVE: ಫಲಿತಾಂಶ: ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಭಾರೀ ಹಿನ್ನಡೆLIVE: ಫಲಿತಾಂಶ: ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಭಾರೀ ಹಿನ್ನಡೆ

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ 2 ಸಾವಿರ ಮತಗಳಿಂದ ಕಾಂಗ್ರೆಸಿನ ಮೊಯ್ದೀನ್ ಬಾವಾ ವಿರುದ್ಧ ಮುಂದಿದ್ದಾರೆ.

Karnataka Election Results 2018: BJP leading in 5 seats out of 8 in Dakshina Kannada

ಮೂಡಬಿದಿರೆ ಕ್ಷೇತ್ರದಲ್ಲಿಯೂ ಬಿಜೆಪಿ ಮುನ್ನಡೆಯಲ್ಲಿದೆ. ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ನಾಲ್ಕು ಬಾರಿಯ ಶಾಸಕ಻ ಅಭಯಚಂದ್ರ ಜೈನ್ ವಿರುದ್ಧ ಬರೋಬ್ಬರಿ 6,792 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೆಳ್ತಂಗಡಿಯಲ್ಲಿ ಬಿಜೆಪಿಯ ಹರೀಶ್ ಪೂಂಜಾ ಹಾಲಿ ಶಾಸಕ ವಸಂತ ಬಂಗೇರರ ವಿರುದ್ಧ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ರೈ ವಿರುದ್ಧ ಭರ್ಜರಿ 6 ಸಾವಿರ ಮತಗಳಿಂದ ಮುಂದಿದ್ದಾರೆ. ಬಂಟ್ವಾಳ ಮತ್ತು ಮಂಗಳೂರು ದಕ್ಷಿಣದಲ್ಲೂ ಕಾಂಗ್ರೆಸ್ ಮುಂದಿದೆ.

ಒಟ್ಟಾರೆ ಬಿಜೆಪಿ 5 , ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುಂದಿದೆ.

English summary
Karnataka Election Results 2018 Live Updates in Kannada. BJP is leading in 5 seats and Congress leading in 3 seats of Dakshina Kannada districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X