ಖಾತೆ ತೆರೆದ ಬಿಜೆಪಿ, ಮೂಡಬಿದಿರೆಯಲ್ಲಿ ಬಿಜೆಪಿಗೆ ಭರ್ಜರಿ ಜಯ
ಮಂಗಳೂರು, ಮೇ 15: ದಕ್ಷಿಣ ಕನ್ನಡದಲ್ಲಿ ಹೆಚ್ಚಿನ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿಯವರೆಗೆ ಬಿಜೆಪಿ ಪಾಲಿಗೆ ಒಲಿಯದಿದ್ದ ಮೂಡಬಿದಿರೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ರಾಜ್ಯದಲ್ಲಿ ಗೆಲುವಿನ ಖಾತೆ ತೆರೆದಿದೆ.
ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಇಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಿರುದ್ಧ ಅವರು ಗೆಲುವು ಸಾಧಿಸಿದ್ದಾರೆ.
ಈ ಕ್ಷೇತ್ರದಲ್ಲಿ ಅಭಯಚಂದ್ರ ಜೈನ್ ಸತತ ನಾಲ್ಕು ಬಾರಿ ಗೆದ್ದಿದ್ದರು. ಮತ್ತು ಬಿಜೆಪಿ ಈ ಕ್ಷೇತ್ರದಲ್ಲಿ ಒಮ್ಮೆಯೂ ಗೆಲುವು ಸಾಧಿಸಿರಲಿಲ್ಲ ಎಂಬುದು ವಿಶೇಷ. ಇದೀಗ ಇದೇ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಗೆಲುವಿನ ಖಾತೆ ತೆರೆದಿದೆ.

ಕರಾವಳಿಯಲ್ಲೇ ಬಿಜೆಪಿ ತನ್ನ ಗೆಲುವಿನ ಅಭಿಯಾನ ಆರಂಭಿಸಿದ್ದು ಅಧಿಕಾರದ ಗದ್ದುಗೆ ಏರುತ್ತಾ ಎಂದು ಕಾದು ನೋಡಬೇಕಿದೆ.












Click it and Unblock the Notifications