ಮಂಗಳೂರಿನಲ್ಲಿ ಗೆಲುವಿನ ನಗೆ ಬೀರಿದ ಸಚಿವ ಯು.ಟಿ.ಖಾದರ್.!
ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಹಾಗೂ ನಾಗರೀಕ ಸರಬರಾಜು ಸಚಿವರಾಗಿದ್ದ ಯು.ಟಿ.ಖಾದರ್ ಕರ್ನಾಟಕ ವಿಧಾನಸಭೆ ಚುನಾವಣೆ 2018ರಲ್ಲಿ ಜಯಭೇರಿ ಬಾರಿಸಿದ್ದಾರೆ.
ಹಾಲಿ ಶಾಸಕ ಯು.ಟಿ.ಖಾದರ್ ಕುಟುಂಬ ಮಂಗಳೂರು ಕ್ಷೇತ್ರದಲ್ಲಿ ಪ್ರಭಾವಿತರು. 1972, 1978, 1999 ಹಾಗೂ 2004 ರಲ್ಲಿ ಯು.ಟಿ.ಖಾದರ್ ತಂದೆ ಯು.ಟಿ.ಫರೀದ್ ಗೆಲುವು ಸಾಧಿಸಿದ್ದರು.
2004ರಲ್ಲಿ ಗೆದ್ದ ನಂತರ ಫರೀದ್ 2007ರಲ್ಲಿ ನಿಧನರಾದರು. ಆಗ ಅವರ ಜಾಗದಲ್ಲಿ ಮಗ ಯು.ಟಿ. ಖಾದರ್ ರನ್ನು ಕಾಂಗ್ರೆಸ್ ಕಣಕ್ಕಿಳಿಸಿತು. ಈ ಚುನಾವಣೆಯಲ್ಲಿ ಖಾದರ್ ಗೆದ್ದರು. ಅಂದಿನಿಂದ ಇಲ್ಲಿಯವರೆಗೂ ಯು.ಟಿ.ಖಾದರ್ ಗೆಲುವಿನ ಓಟ ಮುಂದುವರಿದಿದೆ.

ಮುಸ್ಲಿಂ ಮತದಾರರೇ ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಯು.ಟಿ.ಖಾದರ್ ಸುಲಭವಾಗಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯು.ಟಿ.ಖಾದರ್ ಪಡೆದಿರುವ ಒಟ್ಟು ಮತಗಳು - 80813. ಇನ್ನೂ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ರೈ ಪಡೆದಿರುವ ಒಟ್ಟು ಮತಗಳು - 61074. 3692 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ ಜೆ.ಡಿ.ಎಸ್ ನ ಕೆ.ಅಶ್ರಫ್.












Click it and Unblock the Notifications