ಮಂಗಳೂರು: 58 ಅಭ್ಯರ್ಥಿಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ
Recommended Video

ಮಂಗಳೂರು ಚುನಾವಣಾ ಮತ ಎಣಿಕೆಗೆ ಕ್ಷಣಗಣನೆ | Oneindia Kannada
ಮಂಗಳೂರು, ಮೇ 15: ಕರಾವಳಿ ಭಾಗದ ಅನೇಕ ಪ್ರಮುಖ ರಾಜಕೀಯ ನಾಯಕರ ಭವಿಷ್ಯ ನಿರ್ಧರಿಸುವ ಚುನಾವಣಾ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಮಹಾತ್ಮ ಗಾಂಧಿ ಪಿಯು ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಿದ್ದು, ಕಾಲೇಜಿನ ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿದೆ.
ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿನ 58 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜಿಲ್ಲೆಯ ಒಟ್ಟು 1,858 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ.

ಮತ ಎಣಿಕೆ ಹಿನ್ನೆಲೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.












Click it and Unblock the Notifications