ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು : ಪ್ರಚಾರ ಆರಂಭಿಸಿದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್

|
Google Oneindia Kannada News

ಮಂಗಳೂರು, ಏಪ್ರಿಲ್ 23 : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಸೋಮವಾರ ಅವರು ನಾಮಪತ್ರವನ್ನು ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಕಣಕ್ಕಿಳಿಯಲಿದ್ದಾರೆ.

ಶುಕ್ರವಾರ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗಿದ್ದು, ಭಾರತೀಯ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಪ್ರಭಾವಿ ಯುವ ನಾಯಕ ಡಿ. ವೇದವ್ಯಾಸ್ ಕಾಮತ್ ಅವರು ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿದೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನೋಡಿಬಿಜೆಪಿ ಅಭ್ಯರ್ಥಿಗಳ ಪಟ್ಟಿ ನೋಡಿ

ಶುಕ್ರವಾರ ಸಂಜೆ ವೇದವ್ಯಾಸ್ ಕಾಮತ್ ಅವರು ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀ ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.

Karnataka elections : Vedavyas Kamath begins election campaign

ಶ್ರೀ ಮಂಗಳಾ ದೇವಿ ದೇವಸ್ಥಾನ, ಶ್ರೀ ವೆಂಕಟರಮಣ ದೇವಸ್ಥಾನ, ಶ್ರೀ ಭಗವತಿ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪಕ್ಷದ ಮಾಜಿ ಶಾಸಕರಾದ ಎನ್. ಯೋಗೀಶ್ ಭಟ್, ಬಿಜೆಪಿ ಪದಾಧಿಕಾರಿಗಳಾದ ರಾಮಚಂದ್ರ ಮಿಜಾರ, ನಿತಿನ್ ಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪಾಲೇಮಾರ್ ಗೆ ಟಿಕೆಟ್ ಕೈ ತಪ್ಪುವ ಹಿಂದೆ ನನ್ನ ಕೈವಾಡವಿಲ್ಲ: ನಳಿನ್ಪಾಲೇಮಾರ್ ಗೆ ಟಿಕೆಟ್ ಕೈ ತಪ್ಪುವ ಹಿಂದೆ ನನ್ನ ಕೈವಾಡವಿಲ್ಲ: ನಳಿನ್

ನಾಮಪತ್ರ ಸಲ್ಲಿಕೆ : ಸೋಮವಾರ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಿಂದ ಪಾದಯಾತ್ರೆ ನಡೆಸಿ, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

Karnataka elections : Vedavyas Kamath begins election campaign

ಬಿಜೆಪಿ ಕಾರ್ಯಕರ್ತರು, ನಾಯಕರ ಜೊತೆ ಪಾದಯಾತ್ರೆ ನಡೆಸಲಿರುವ ವೇದವ್ಯಾಸ ಕಾಮತ್ ಅವರು, ನಂತರ ನಾಮಪತ್ರವನ್ನು ಸಲ್ಲಿಸಲಿದ್ದಾರೆ. 2018ರ ಚುನಾವಣೆಯಲ್ಲಿ ವೇದವ್ಯಾಸ್ ಕಾಮತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್‌ನಿಂದ ಜಿ.ಆರ್.ಲೋಬೋ ಕಣದಲ್ಲಿದ್ದಾರೆ.

English summary
Mangalore south assembly constituency BJP candidate Vedavyas Kamath began his campaign for Karnataka assembly elections 2018. J.R.Lobo Congress candidate in constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X