ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆ; ನೆಲ ಕಚ್ಚಿದ 7 ಮನೆಗಳು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಆಗಸ್ಟ್ 9: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ನೇತ್ರಾವತಿ, ಕುಮಾರಧಾರಾ, ಸ್ವರ್ಣಾ, ಸೀತಾ ಸಹಿತ ಪ್ರಮುಖ ನದಿಗಳು ಉಕ್ಕಿ, ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ಸ್ನಾನಘಟ್ಟ ಮುಳುಗಿದ್ದು, ನದಿಯ ನೀರಿನಿಂದ ಅಂಗಡಿಗಳು ಮುಳುಗಿವೆ. ಉಪನದಿ ದರ್ಪಣತೀರ್ಥ ಉಕ್ಕೇರಿದ್ದು, ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ಕುಲ್ಕುಂದ, ನೂಚಿಲ ಪ್ರದೇಶಗಳಲ್ಲಿ ಸುಮಾರು 30 ಮನೆಗಳಿಗೆ ನೀರು ನುಗ್ಗಿದೆ.

ಕೆಆರ್‌ಎಸ್‌ಗೆ ಭಾರಿ ನೀರು; 100 ಅಡಿ ತಲುಪಿದ ನೀರಿನ ಮಟ್ಟಕೆಆರ್‌ಎಸ್‌ಗೆ ಭಾರಿ ನೀರು; 100 ಅಡಿ ತಲುಪಿದ ನೀರಿನ ಮಟ್ಟ

ನೇತ್ರಾವತಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಬಂಟ್ವಾಳ- ಪಾಣೆಮಂಗಳೂರು ಭಾಗದಲ್ಲೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇಲ್ಲಿಯ 10ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ. ಜಿಲ್ಲೆಯಲ್ಲಿ ಗಾಳಿಗೆ ಮರ ಬಿದ್ದು, ಹಲವು ಮನೆಗಳು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

Karnataka Flood: Heavy Rain Continued In Dakshina Kannada District

ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ತಲಾ 13 ಜನರ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಎನ್‌ಡಿಆರ್ ಎಫ್ ನಿಯೋಜಿಸಲಾಗಿದೆ. ಸುಳ್ಯದ ಕಂದಡ್ಕ, ಮಿತ್ತೂರು, ಪಂಜ, ಅರಂಬೂರು, ಪೆರೋಡಿ, ಕಡಬದ ಉಚ್ಚಿಲ, ಕುಲ್ಕುಂದ ಮತ್ತು ಅಲಂಕಾರ್ ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.

In Pics: ಕರ್ನಾಟಕದಲ್ಲಿ ಮಹಾ ಮಳೆ

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುಕ್ಕಾವು ಸೇತುವೆ ಕೊಚ್ಚಿ ಹೋಗಿದೆ. ಪರಿಣಾಮವಾಗಿ ಸೋಮಂತಡ್ಕ- ಕಾಜೂರು ಸಂಪರ್ಕ ರಸ್ತೆ ಕಡಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 7 ಮನೆಗಳು ಕುಸಿದಿದೆ. ಬೆಳ್ತಂಗಡಿ ತಾಲೂಕಿನ ಕಾಜೂರು- ಕೊಲ್ಲಿ, ಮಲವಂತಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಪಾಯದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನೆ ಮಾಡಿದ್ದಾರೆ.

English summary
Heavy rain continued in Dakshina Kannada district. 7 house collapsed in Rain. Here is the details of rain effect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X