ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 10ರಂದು ಶಾಲಾ- ಕಾಲೇಜುಗಳಿಗೆ ರಜಾ
ಮಂಗಳೂರು, ಆಗಸ್ಟ್ 9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಆಗಸ್ಟ್ 10ರಂದು ರಜಾ ಘೋಷಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಆಗಸ್ಟ್ 10ರಂದು ರಜಾ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಜೀವನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಯ ನೀರಿನ ಮಟ್ಟ ಗಂಟೆ ಗಂಟೆಗೂ ಹೆಚ್ಚಾಗುತ್ತಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಪರಿಣಾಮ ನದಿ ತೀರದಲ್ಲಿರುವ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.












Click it and Unblock the Notifications