ದಕ್ಷಿಣ ಕನ್ನಡ ವಿಭಾಗಕ್ಕೆ ಆನೆ ಕಾರ್ಯಪಡೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ
ಮಂಗಳೂರು, ಮಾರ್ಚ್ 5: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗದಲ್ಲಿ ಮಾನವ-ಆನೆ ಸಂಘರ್ಷವನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಪ್ರತ್ಯೇಕ 'ಆನೆ ಕಾರ್ಯಪಡೆ' (Elephant Task Force) ರಚನೆಗೆ ಅನುಮೋದನೆ ನೀಡಿದೆ.
ಜಿಲ್ಲೆಯ ಸುಳ್ಯ, ಕಡಬ, ಬೆಳ್ತಂಗಡಿ ಮತ್ತು ಪುತ್ತೂರು ಭಾಗಗಳಲ್ಲಿ ಹೆಚ್ಚುತ್ತಿರುವ ಆನೆಗಳ ದಾಳಿಯನ್ನು ತಡೆಗಟ್ಟುವುದು, ಬೆಳೆ ಹಾನಿ ತಪ್ಪಿಸುವುದು ಮತ್ತು ಮಾನವ ಜೀವಹಾನಿಯನ್ನು ನಿಯಂತ್ರಿಸುವುದು ಇದರ ಪ್ರಮುಖ ಉದ್ಧೇಶವಾಗಿದೆ. ಈ ವಿಶೇಷ ತಂಡವು ಒಟ್ಟು 28 ಸಿಬ್ಬಂದಿಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಪಶುವೈದ್ಯಕೀಯ ಅಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿಗಳು, ಅರಣ್ಯ ರಕ್ಷಕರು ಸೇರಿದಂತೆ ಹೊರಗುತ್ತಿಗೆ ಆಧಾರಿತ ಸಿಬ್ಬಂದಿಗಳು ಇರುತ್ತಾರೆ.

ಪ್ರಕಟಣೆಯಲ್ಲಿರುವ ಪ್ರಮುಖ ಅಂಶಗಳು
ಈ ಪಡೆಯು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ಸುಳ್ಯ ಭಾಗದಲ್ಲಿ ಮುಖ್ಯ ಕಚೇರಿತಲಿದ ಇರಲಿದೆ. ಆನೆಗಳು ಹೆಚ್ಚಾಗಿ ಬರುವ ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳಲ್ಲಿ ನಿರಂತರ ಗಸ್ತು ತಿರುಗಲಾಗುವುದು. ಆನೆಗಳು ಕಾಡಿನಿಂದ ಹೊರಬಂದ ತಕ್ಷಣವೇ ಅವುಗಳನ್ನು ಮರಳಿ ಅರಣ್ಯಕ್ಕೆ ಓಡಿಸುವ ಕೆಲಸ ಮಾಡಬಹುದು ಮಾಡುವುದು ಎಂದು ತಿಳಿಸಿದೆ.
ಮುನ್ನೆಚ್ಚರಿಕೆ ಸಂದೇಶ ರವಾನೆ
ಆನೆಗಳ ಓಡಾಟದ ಬಗ್ಗೆ ನಿಯಂತ್ರಣ ಕೊಠಡಿಯ ಮೂಲಕ ಸ್ಥಳೀಯ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಸಂದೇಶಗಳನ್ನು ರವಾನಿಸಲಾಗುವುದು. ಆನೆಗಳ ಚಲನವಲನ ಪತ್ತೆಹಚ್ಚಲು ಡ್ರೋನ್ ಮತ್ತು ಆಧುನಿಕ ಉಪಕರಣಗಳ ಬಳಕೆ. ಈ ಮೊದಲು ಮಂಗಳೂರು ವಿಭಾಗವು ಆನೆಗಳನ್ನು ಓಡಿಸಲು ಮಡಿಕೇರಿ ಅಥವಾ ಹಾಸನ ವಿಭಾಗದ ಕಾರ್ಯಪಡೆಯ ಮೇಲೆ ಅವಲಂಬಿತವಾಗಿತ್ತು. ಇದೀಗ ಈ ಹೊಸ ಪಡೆಯಿಂದಾಗಿ ಸ್ಥಳೀಯವಾಗಿ ವೇಗವಾಗಿ ಸ್ಪಂದಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದೆ.
ಬೆಳೆ ಹಾಗೂ ಮಾನವ ಜೀವ ಹಾನಿ
ಇತ್ತೀಚಿನ ವರ್ಷಗಳಲ್ಲಿ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ಅರಣ್ಯ ವಲಯಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗಿರುವುದರಿಂದ ಬೆಳೆ ಹಾನಿ ಹಾಗೂ ಕೆಲವೊಮ್ಮೆ ಮಾನವ ಜೀವ ಹಾನಿಯ ಘಟನೆಗಳು ಹೆಚ್ಚಾಗಿವೆ. ಇದುವರೆಗೆ ಆನೆಗಳನ್ನು ಮತ್ತೆ ಅರಣ್ಯ ಪ್ರದೇಶಗಳಿಗೆ ಓಡಿಸಲು ಮಡಿಕೇರಿ ವಿಭಾಗದಿಂದ ತಂಡಗಳನ್ನು ನಿಯೋಜಿಸಲಾಗುತ್ತಿತ್ತು. ಆದರೆ ಈ ತಂಡಗಳು ದೂರದಿಂದ ಬರಬೇಕಾಗಿರುವುದರಿಂದ ಪ್ರತಿಕ್ರಿಯೆಯಲ್ಲಿ ವಿಳಂಬವಾಗುತ್ತಿದೆ.
ಮಂಗಳೂರು ವಿಭಾಗಕ್ಕಾಗಿ ಪ್ರತ್ಯೇಕ ಕಾರ್ಯಪಡೆ
ಈ ಗಮನದಲ್ಲಿಟ್ಟುಕೊಂಡು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮಂಗಳೂರು ವಿಭಾಗಕ್ಕಾಗಿ ಪ್ರತ್ಯೇಕ ಕಾರ್ಯಪಡೆ (ಟಾಸ್ಕ್ ಫೋರ್ಸ್) ರಚಿಸಲು ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ. ಟಾಸ್ಕ್ ಫೋರ್ಸ್‌ನ ಮುಖ್ಯ ಕಚೇರಿ ಸುಳ್ಯದಲ್ಲಿ ಇರಲಿದ್ದು, ಇದು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕಾರ್ಯನಿರ್ವಹಿಸಲಿದೆ. ಈ ಭಾಗಕ್ಕೆ ವಿಶೇಷ ಟಾಸ್ಕ್ ಫೋರ್ಸ್ ಮಂಜೂರು ಮಾಡುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಈ ಹಿಂದೆ ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications