ಮಂಗಳೂರು; ಕೋವಿಡ್ ಚಿಕಿತ್ಸೆಗೆ 30 ಆಸ್ಪತ್ರೆ ಗುರುತಿಸಿದ ಸರ್ಕಾರ; 12 ಆಸ್ಪತ್ರೆಗಳ ಒಪ್ಪಿಗೆ
ಮಂಗಳೂರು, ಜೂನ್ 24: ಕೊರೊನಾ ವೈರಸ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ನೀಡಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಇದಕ್ಕಾಗಿ ಚಿಕಿತ್ಸಾ ದರಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಲ್ಲೂ ಸರ್ಕಾರ ಕೊರೊನಾ ವೈರಸ್ ಚಿಕಿತ್ಸೆಗೆ 30 ಆಸ್ಪತ್ರೆಗಳನ್ನು ಗುರುತಿಸಿದೆ. ಇವುಗಳಲ್ಲಿ ಈಗಾಗಲೇ 12 ಆಸ್ಪತ್ರೆಗಳು ಸರ್ಕಾರದ ಕೋರಿಕೆಗೆ ತಕ್ಷಣವೇ ಸ್ಪಂದಿಸಿ ಕೋವಿಡ್ 19 ರೋಗಿಗಳಿಗೆ ಚಿಕಿತ್ಸೆ ನೀಡುವ ಭರವಸೆ ನೀಡಿವೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಿಸುವ ಉದ್ದೇಶ ಸರ್ಕಾರದ್ದಾಗಿದ್ದು, ಇದಕ್ಕಾಗಿ ರಾಜ್ಯದಲ್ಲಿ ಒಟ್ಟು 483 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದೆ.

ದ. ಕ ಜಿಲ್ಲೆಯಲ್ಲೂ ಮೂವತ್ತು ಆಸ್ಪತ್ರೆಗಳನ್ನು ಕೊರೊನಾ ವೈರಸ್ ಚಿಕಿತ್ಸೆಗೆ ಗುರುತಿಸಲಾಗಿದ್ದು ಈ ಪೈಕಿ 12 ಆಸ್ಪತ್ರೆಗಳು ತಕ್ಷಣವೇ ಸ್ಪಂದಿಸಿದ್ದು, 18 ಆಸ್ಪತ್ರೆಗಳ ಮುಖ್ಯಸ್ಥರು ಸಮಯಾವಕಾಶ ಕೇಳಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿ ಪಡಿಸಿದ ದರದಲ್ಲಿಯೇ ಚಿಕಿತ್ಸೆ ಸಿಗುತ್ತದೆ. ಆರೋಗ್ಯ ವಿಮೆ ಹೊಂದಿರುವವರಿಗೆ ಈ ದರ ಅನ್ವಯವಾಗುವುದಿಲ್ಲ.












Click it and Unblock the Notifications