ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು; ಕೋವಿಡ್ ಚಿಕಿತ್ಸೆಗೆ 30 ಆಸ್ಪತ್ರೆ ಗುರುತಿಸಿದ ಸರ್ಕಾರ; 12 ಆಸ್ಪತ್ರೆಗಳ ಒಪ್ಪಿಗೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 24: ಕೊರೊನಾ ವೈರಸ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ನೀಡಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಇದಕ್ಕಾಗಿ ಚಿಕಿತ್ಸಾ ದರಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಲ್ಲೂ ಸರ್ಕಾರ ಕೊರೊನಾ ವೈರಸ್ ಚಿಕಿತ್ಸೆಗೆ 30 ಆಸ್ಪತ್ರೆಗಳನ್ನು ಗುರುತಿಸಿದೆ. ಇವುಗಳಲ್ಲಿ ಈಗಾಗಲೇ 12 ಆಸ್ಪತ್ರೆಗಳು ಸರ್ಕಾರದ ಕೋರಿಕೆಗೆ ತಕ್ಷಣವೇ ಸ್ಪಂದಿಸಿ ಕೋವಿಡ್ 19 ರೋಗಿಗಳಿಗೆ ಚಿಕಿತ್ಸೆ ನೀಡುವ ಭರವಸೆ ನೀಡಿವೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಚಿಕಿತ್ಸೆಗೆ ದರ ನಿಗದಿಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಚಿಕಿತ್ಸೆಗೆ ದರ ನಿಗದಿ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಿಸುವ ಉದ್ದೇಶ ಸರ್ಕಾರದ್ದಾಗಿದ್ದು, ಇದಕ್ಕಾಗಿ ರಾಜ್ಯದಲ್ಲಿ ಒಟ್ಟು 483 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದೆ.

Government Identified 30 Hospitals To Treat Coronavirus In Dakshina Kannada

ದ. ಕ ಜಿಲ್ಲೆಯಲ್ಲೂ ಮೂವತ್ತು ಆಸ್ಪತ್ರೆಗಳನ್ನು ಕೊರೊನಾ ವೈರಸ್ ಚಿಕಿತ್ಸೆಗೆ ಗುರುತಿಸಲಾಗಿದ್ದು ಈ ಪೈಕಿ 12 ಆಸ್ಪತ್ರೆಗಳು ತಕ್ಷಣವೇ ಸ್ಪಂದಿಸಿದ್ದು, 18 ಆಸ್ಪತ್ರೆಗಳ ಮುಖ್ಯಸ್ಥರು ಸಮಯಾವಕಾಶ ಕೇಳಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿ ಪಡಿಸಿದ ದರದಲ್ಲಿಯೇ ಚಿಕಿತ್ಸೆ ಸಿಗುತ್ತದೆ. ಆರೋಗ್ಯ ವಿಮೆ ಹೊಂದಿರುವವರಿಗೆ ಈ ದರ ಅನ್ವಯವಾಗುವುದಿಲ್ಲ.

English summary
In Dakshina Kannada district, the government has identified 30 hospitals to treat coronavirus. Of these, 12 hospitals have already responded to the government's request and promised to treat coronavirus patients,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X