ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಮೋದ್ ಮುತಾಲಿಕ್‌ಗೆ ಇನ್ನು ದ.ಕ ಜಿಲ್ಲೆ ಎಂಟ್ರಿ ಸಲೀಸು

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಸೆ.20: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಇನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸುಲಭವಾಗಿ ಭೇಟಿ ನೀಡಬಹುದಾಗಿದೆ. ಅವರು ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದು ಪಡಿಸಿದೆ.

ಇದರಿಂದಾಗಿ ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆ ಭೇಟಿಗೆ ಮತ್ತು ಮಂಗಳೂರಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರು ಭೇಟಿಗೆ ಇದ್ದ ಅಡ್ಡಿ ನಿವಾರಣೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದ ಕ್ರಮ ಪ್ರಶ್ನಿಸಿ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ. ಅಲ್ಲದೆ, ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ವಗಾವಣೆ ಮಾಡಿ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಮುಂದಿನ ಚುನಾವಣೆಯಲ್ಲಿ ಹಿಂದೂ ಕಾರ್ಯಕರ್ತರಿಗೆ 25 ಸೀಟು ಕೊಡಬೇಕು: ಬಿಜೆಪಿಗೆ ಮುತಾಲಿಕ್ ಆಗ್ರಹಮುಂದಿನ ಚುನಾವಣೆಯಲ್ಲಿ ಹಿಂದೂ ಕಾರ್ಯಕರ್ತರಿಗೆ 25 ಸೀಟು ಕೊಡಬೇಕು: ಬಿಜೆಪಿಗೆ ಮುತಾಲಿಕ್ ಆಗ್ರಹ

ಆದೇಶವೇನು?: ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಜಿಲ್ಲಾಡಳಿತ ಹೊರಡಿಸಿರುವ ಅಪರಾಧ ದಂಡ ಸಂಹಿತೆ ಸೆಕ್ಷನ್ 144 ಪ್ರಕಾರ ಎರಡು ತಿಂಗಳ ಅವಧಿಗೆ ಮಾತ್ರ ನಿರ್ಬಂಧ ವಿಧಿಸಲು ಅವಕಾಶವಿದೆ. ಈಗಾಗಲೇ ಅವಧಿ ಮುಗಿದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ವರ್ಗಾವಣೆ ಮಾಡಲಾಗುವುದು ಅಲ್ಲಿ, ಅರ್ಜಿದಾರರ ವಾದ ಆಲಿಸಿ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬಹುದಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

Karnataka HC set aside the order of police on banning Pramod Muthalik entry in DK District

ಅರ್ಜಿದಾರರ ಪರ ವಕೀಲರು, ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸರು ಹೊರಡಿಸಿರುವ ಆದೇಶ ನಿಯಮ ಬಾಹಿರ. ಸುಪ್ರೀಂಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿದ್ದು ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ಅಲ್ಲದೆ, ಅರ್ಜಿದಾರರಿಗೆ ಯಾವ ಕಾರಣಕ್ಕೆ ನಿರ್ಬಂಧ ವಿಧಿಸಿದ್ದಾರೆ ಎಂಬುದಕ್ಕೆ ವಿವರಣೆ ನೀಡಿಲ್ಲ. ಏಕಾಏಕಿ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ ಜಿಲ್ಲಾಡಳಿತದ ಆದೇಶ ರದ್ದು ಮಾಡಬೇಕು ಎಂದು ಕೋರಿದರು.

ಪ್ರಕರಣದ ವಿವರ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ಜು. 28ರ ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೂ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಮಾಡದಂತೆ ಜಿಲ್ಲಾಧಿಕಾರಿಗಳು ಜು.28ರಂದು ಆದೇಶ ಹೊರಡಿಸಿದ್ದರು. ಆನಂತರ ಜುಲೈ 28ರಿಂದ ಆಗಸ್ಟ್ 3 ರವರೆಗೂ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾ ಪೊಲೀಸ್ ಆಯುಕ್ತರು ಆದೇಶಿಸಿದ್ದರು.

ಜುಲೈ29 ರಂದು ಮಂಗಳೂರಿಗೆ ಆಗಮಿಸಿದ್ದು ಅವರನ್ನು ಪೊಲೀಸರು ತಡೆದು ಜಿಲ್ಲಾಡಳಿತ ಮತ್ತು ಪೊಲೀಸರು ಹೊರಡಿಸಿರುವ ಆದೇಶವನ್ನು ವಿವರಿಸಿದ್ದರು. ಇದಾದ ನಂತರ ಅರ್ಜಿದಾರರ ಮಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ ಷರತ್ತುಗಳನ್ನು ವಿಧಿಸಿ ಮೃತಪಟ್ಟ ಪ್ರವೀಣ್ ನೆಟ್ಟಾರು ಕುಟುಂಬಸ್ಥರ ಭೇಟಿಗೆ ಅವಕಾಶ ನೀಡುವುದಕ್ಕೆ ಮನವಿ ಮಾಡಿದ್ದರು. ಆದರೂ ಅವಕಾಶ ನೀಡದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

Karnataka HC set aside the order of police on banning Pramod Muthalik entry in DK District

ಇತ್ತೀಚೆಗೆ ಪುತ್ತೂರಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬೆಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಪೋಷಕರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿ, ಪ್ರವೀಣ್ ಸಾವಿಗೆ ನ್ಯಾಯ ಸಿಗುವರೆಗೂ ಇಡೀ ಹಿಂದೂ ಸಮಾಜ ತಮ್ಮ‌ ಜೊತೆ ಇರೋದಾಗಿ ಭರವಸೆ ನೀಡಿದರು.

ಬಳಿಕ ಪ್ರವೀಣ್ ಸಮಾಧಿ ಸ್ಥಳಕ್ಕೆ ತೆರಳಿ ಸಮಾಧಿಗೆ ಕೇಸರಿ ಶಾಲು ಹಾಕಿ ಗೌರವ ಸಲ್ಲಿಸಿದರು. ಪ್ರವೀಣ್ ಹತ್ಯೆಯಾದ ಬೆಳ್ಳಾರೆಯಲ್ಲಿರುವ ಪ್ರವೀಣ್ ಕೋಳಿ ಅಂಗಡಿಗೂ ಭೇಟಿ ನೀಡಿದ ಮುತಾಲಿಕ್, ಸದ್ಯ ಪ್ರವೀಣ್ ಅಂಗಡಿಯನ್ನು ಪಡೆದಿರುವ ಹಿಂದೂ ಕಾರ್ಯಕರ್ತನನ್ನು ಭೇಟಿ‌ ಮಾಡಿ ಶುಭ ಹಾರೈಸಿದ್ದಾರೆ.

ನಂತರ ಮಾತನಾಡಿ, ಪ್ರವೀಣ್ ಹತ್ಯೆಯ ಬಳಿಕ ಜಿಲ್ಲೆಗೆ ಬರದಂತೆ ಸರ್ಕಾರ ಬ್ಯಾನ್ ಮಾಡಿತು. ಹೈಕೋರ್ಟ್ ಮೆಟ್ಟಿಲೇರಿ ಇದಕ್ಕೆ ಸ್ಟೇ ತಂದು ಇವತ್ತು ಪ್ರವೀಣ್ ಮನೆಗೆ ಭೇಟಿ ನೀಡಿದ್ದೇನೆ. ಇಂದಿಗೂ ಪ್ರವೀಣ್ ಮನೆಯವರು ನೋವು‌ ಸಿಟ್ಟಿನಲ್ಲಿದ್ದಾರೆ. ಕೊಲೆ ಕಟುಕರಿಗೆ ಗಲ್ಲುಶಿಕ್ಷೆ ಆಗುವವರೆಗೆ ದುಃಖ ಶಮನ ಆಗಲ್ಲ ಎಂದಿದ್ದಾರೆ.

ಪ್ರವೀಣ್ ಪತ್ನಿಗೆ ನೌಕರಿ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಈ ರೀತಿಯ ಹೇಳಿಕೆ ಹಿಂದೆಯೂ ಕೊಟ್ಟಿದ್ದಾರೆ. ಆದರೆ ಇದು ಯಾವುದು ಕಾರ್ಯ ರೂಪಕ್ಕೆ ಬಂದಿಲ್ಲ. ಈ ಕೂಡಲೇ ನೌಕರಿ ನೀಡುವ ಆದೇಶ ಮಾಡಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಮಾಡಬೇಕಾಗುತ್ತದೆ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

English summary
The Karnataka High Court recently set aside an order restraining Sri Ram Sene Founder Pramod H. Mutalik
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X