ಮಂಗಳೂರಿನ 49 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
ಮಂಗಳೂರು,ಫೆಬ್ರವರಿ 04: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂದು ನಿಟ್ಟುಸಿರು ಬಿಡಬೇಡಿ, ಮಂಗಳೂರು ಹೊರವಲಯದಲ್ಲಿರುವ ಉಳ್ಳಾಲ ಖಾಸಗಿ ನರ್ಸಿಂಗ್ ಕಾಲೇಜಿನ 49 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.
ವಿದ್ಯಾರ್ಥಿಗಳೆಲ್ಲರೂ ಕೇರಳ ಮೂಲದವರು. ಪ್ರಸ್ತುತ ಇಡೀ ಕಾಲೇಜು ಮತ್ತು ಹಾಸ್ಟೆಲ್‌ನ್ನು ಸೀಲ್‌ಡೌನ್ ಮಾಡಲಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.
ಈ ನರ್ಸಿಂಗ್ ಕಾಲೇಜಿನಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ಸೇರಿ 120 ಮಂದಿ ಇದ್ದಾರೆ. ಕೆಲ ದಿನಗಳ ಹಿಂದೆ 6 ವಿದ್ಯಾರ್ಥಿಗಳಿಗೆ ಸೋಂಕಿನ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದಾಗ ಜ.29ರಂದು ಪಾಸಿಟಿವ್ ದೃಢಪಟ್ಟಿತ್ತು. ತಕ್ಷಣ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಎಲ್ಲ 120 ಮಂದಿಯ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದುವರೆ 49 ಮಂದಿಗೆ ಸೋಂಕು ಖಚಿತವಾಗಿದೆ.

ಎಲ್ಲ ಸೋಂಕಿತರಿಗೂ ಸಂಸ್ಥೆಯಲ್ಲಿಯೇ ಐಸೋಲೇಶನ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರಲ್ಲದ ಇತರರನ್ನು ಪ್ರಾಥಮಿಕ ಸಂಪರ್ಕ ಎಂದು ಪರಿಗಣಿಸಲಾಗಿದ್ದು, ಅವರನ್ನೂ ಪ್ರತ್ಯೇಕವಾಗಿ ಅದೇ ಕಟ್ಟಡದಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿಗಳ ನಿದೇಶನದಂತೆ ಶಿಕ್ಷಣ ಸಂಸ್ಥೆಯನ್ನು ಫೆ.19ರವರೆಗೆ ಸೀಲ್ ಡೌನ್ ಮಾಡಲಾಗಿದೆ.
ಇನ್ನೂ ಈ ಸಂಬಂಧ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ 49 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಮೈ ಮರೆಯದಂಚೆ ಎಚ್ಚರಿಕೆಯ ಗಂಟೆಯಾಗಿದೆ.
ಜನರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮಾಡದೇ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಕೋವಿಡ್ ಇನ್ನೂ ಬೆದರಿಕೆಯಗಿಯೇ ಉಳಿದಿದೆ ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications