ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇರಳದಲ್ಲಿ ಕರ್ನಾಟಕದ ವಾಹನಗಳನ್ನು ತಡೆದು ಪ್ರತಿಭಟನೆ: ಕಾರಣ?

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಫೆಬ್ರವರಿ 22: ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, ರಾಜ್ಯದ ಗಡಿಗಳಲ್ಲಿ ಆರೋಗ್ಯ ಇಲಾಖೆಯ ಕಾರ್ಯಕರ್ತರು ಬಿಗಿ ತಪಾಸಣೆ ನಡೆಸುತ್ತಿದ್ದಾರೆ.

ಮಂಗಳೂರು ಸಮೀಪದ ತಲಪಾಡಿ ಚೆಕ್‌ ಪೋಸ್ಟ್‌ ನಲ್ಲಿ ತಪಾಸಣೆ ನಡೆಯುತ್ತಿದ್ದು, ಇದಕ್ಕೆ ಕೇರಳ ರಾಜ್ಯದವರಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ.

ಕೋವಿಡ್ ಹೆಚ್ಚಳ; ದಕ್ಷಿಣ ಕನ್ನಡ-ಕೇರಳ ಗಡಿ 9 ರಸ್ತೆಗಳು ಬಂದ್ ಕೋವಿಡ್ ಹೆಚ್ಚಳ; ದಕ್ಷಿಣ ಕನ್ನಡ-ಕೇರಳ ಗಡಿ 9 ರಸ್ತೆಗಳು ಬಂದ್

ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಕೇರಳದ ವಾಹನಗಳನ್ನು ತಪಾಸಣೆಗೊಳಪಡಿಸುತ್ತಿದ್ದಾರೆ. ಆದರೆ ಇದಕ್ಕೆ ಪ್ರತಿರೋಧ ಒಡ್ಡಿರುವ ಕೇರಳದ ಕೆಲವು ಸಂಘಟನೆಗಳು, ಕರ್ನಾಟಕ ರಾಜ್ಯದ ವಾಹನಗಳನ್ನು ತಲಪಾಡಿ ಗಡಿಯಲ್ಲಿ ತಡೆದು ಪ್ರತಿಭಟನೆ ನಡೆಸುತ್ತಿವೆ.

Mangaluru: Karnataka Vehicles Restrictions In Kerala Border: Protest

ಕೆ.ಎಸ್.ಆರ್.ಟಿ.ಸಿ ಬಸ್ ಗಳು ಸೇರಿದಂತೆ ಕರ್ನಾಟಕದ ಎಲ್ಲಾ ವಾಹನಗಳು ಕೇರಳವನ್ನು ಪ್ರವೇಶಿಸಲಾಗದೆ ಸಾಲುಗಟ್ಟಿ ನಿಂತಿವೆ. ಕೇರಳದ ಆಂಬ್ಯುಲೆನ್ಸ್ ಸೇರಿದಂತೆ ತುರ್ತು ವಾಹನಗಳನ್ನು, ವಿದ್ಯಾರ್ಥಿಗಳನ್ನು ಕೂಡ ಕರ್ನಾಟಕ ರಾಜ್ಯದಲ್ಲಿ ತಡೆ ಹಿಡಿಯುತ್ತಿರುವುದರಿಂದ ಕೇರಳಕ್ಕೆ ಕರ್ನಾಟಕದ ಒಂದೇ ಒಂದು ವಾಹನ ಪ್ರವೇಶಿಸಲು ಬಿಡುವುದಿಲ್ಲವೆಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Mangaluru: Karnataka Vehicles Restrictions In Kerala Border: Protest

ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದು, ಕರ್ನಾಟಕದ ಎಲ್ಲಾ ವಾಹನಗಳನ್ನು ತಡೆದಿದ್ದಾರೆ. ಕರ್ನಾಟಕ ಸರ್ಕಾರ ತಕ್ಷಣ ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಬೇಕು ಮತ್ತು ಸಮಸ್ಯೆಯನ್ನು ಬಗೆಹರಿಸಬೇಕೆಂದು ವಾಹನಗಳಲ್ಲಿರುವ ಕನ್ನಡಿಗರು ಒತ್ತಾಯಿಸುತ್ತಿದ್ದಾರೆ.

English summary
The state government has mandated the Covid Negative Report for those coming to Karnataka from Kerala. The people of Kerala expressed strong opposition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X