• search
 • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜೂನ್ 14 ರಿಂದ ಕಟೀಲು ದುರ್ಗಾಪರಮೇಶ್ವರಿ ದರ್ಶನ ಆರಂಭ

|

ಮಂಗಳೂರು, ಜೂನ್ 12: ಜೂನ್ 8 ರಿಂದ ರಾಜ್ಯಾದ್ಯಂತ ಈಗಾಗಲೇ ಹಲವು ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ. ಅದರಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಜೂನ್ 14 ರ ಭಾನುವಾರದಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

   ಇವರಿಗೇ ಪರಿಷತ್ ಸ್ಥಾನ ಕೊಡಬೇಕು ಎಂದ ಸಚಿವ ಎಸ್.ಟಿ ಸೋಮಶೇಖರ್ | ST Somashekar | Oneindia Kannada

   ಆದರೆ ಭಕ್ತರು ದೇವಸ್ಥಾನದ ವೆಬ್ ಸೈಟ್ ನಿಂದ ಉಚಿತವಾಗಿ ಇ-ಟಿಕೆಟ್ ಮೂಲಕ ತಮ್ಮ ದರ್ಶನದ ಅವಕಾಶವನ್ನು ಕಾಯ್ದಿರಿಸಬೇಕಾಗುತ್ತದೆ. ದೇವಸ್ಥಾನವೊಂದು ದೇವರ ದರ್ಶನಕ್ಕೆ ಇ-ಟಿಕೆಟ್ ಮೂಲಕ ಕಾದಿರಿಸುವ ವ್ಯವಸ್ಥೆ ಮಾಡಿರುವುದು ರಾಜ್ಯದಲ್ಲೇ ಮೊದಲ ಪ್ರಯೋಗವಾಗಿದೆ. ದೇವರ ದರ್ಶನಕ್ಕೆ ಸರ್ಕಾರ ಕೆಲವೊಂದು ನಿಯಮಗಳನ್ನು ರೂಪಿಸಿರುವುದರಿಂದ ಇದನ್ನು ಪಾಲಿಸಲು ಕಟೀಲು ದೇವಸ್ಥಾನದಲ್ಲಿ ಕೊಂಚ ಕಷ್ಟವಾಗಿತ್ತು.

   ದಕ್ಷಿಣ ಕನ್ನಡ ಜಿಲ್ಲೆಯ ಯಾವ ಯಾವ ದೇವಸ್ಥಾನಗಳು ಇಂದು ತೆರೆದವು?

   ಭಕ್ತರು ದೇವಸ್ಥಾನ ಭೇಟಿ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಮಾಡಬೇಕಾಗಿರುವುದರಿಂದ ಭಕ್ತರ ಸರತಿ ಸಾಲಿನ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇತ್ಯಾದಿ ಸಮಸ್ಯೆಗಳಿಗೆ ಸಿದ್ಧತೆಯ ಅಗತ್ಯ ಇತ್ತು. ಹಾಗಾಗಿ ಕಳೆದ ಜೂನ್ 8 ರಂದು ಕಟೀಲು ದೇಗುಲ ಭಕ್ತರ ದರ್ಶನಕ್ಕೆ ತೆರೆದಿರಲಿಲ್ಲ.

   ಇದೀಗ ಜೂನ್ 14ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಲು ದೇಗುಲದ ವಠಾರದ ಅಲ್ಲಲ್ಲಿ ಬಾಕ್ಸ್ ಹಾಕಲಾಗಿದೆ. ಇ-ಪಾಸ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗಿದ್ದು, ಪ್ರಾಯೋಗಿಕವಾಗಿಯೂ ನೋಡಲಾಗಿದೆ ಎಂದು ದೇವಸ್ಥಾನದ ಅಡಳಿತ ಮಂಡಳಿ ತಿಳಿಸಿದೆ.

   ಭಕ್ತರು ವೆಬ್ ಸೈಟ್ ಮೂಲಕ ನೋಂದಾಯಿಸಿ ದೇಗುಲಕ್ಕೆ ಬರಬಹುದಾಗಿದೆ. ಪ್ರತಿ ಹದಿನೈದು ನಿಮಿಷಕ್ಕೆ ಅರವತ್ತು ಜನರನ್ನು ದೇವಾಲಯಕ್ಕೆ ಭೇಟಿ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 7.30 ರಿಂದ ಸಂಜೆ 7.30 ರ ತನಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

   ಸ್ಥಳೀಯ ಭಕ್ತರಿಗೆ ಇ-ಪಾಸ್ ಇಲ್ಲದೆ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದ್ದು, ಬೆಳಿಗ್ಗೆ ಗಂಟೆ 6 ರಿಂದ 7.30 ರ ವರೆಗಿನ ಒಂದೂವರೆ ಗಂಟೆ ಸಮಯ ನಿಗದಿಪಡಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ಮಾಡಿ ಭಕ್ತರನ್ನು ಒಳ ಬಿಡಲಾಗುತ್ತದೆ. ಆದರೆ ಅನ್ನಪ್ರಸಾದ ಸೇರಿದಂತೆ ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ.

   English summary
   Devotees are being allowed to visit the Kateel Sri Durgaparameshwari Temple from Sunday 14th June.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X