ಕುಕ್ಕೆ ಸುಬ್ರಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ
Recommended Video

ಮಂಗಳೂರು, ಅಕ್ಟೋಬರ್ 03 : ಭಾರತೀಯ ಕ್ರಿಕೆಟ್ ತಂಡದ ಉದಯೋನ್ಮುಖ ತಾರೆ ಕೆ.ಎಲ್.ರಾಹುಲ್ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರು. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರಕ್ಕೆ ಬೆಳಗ್ಗೆ ಭೇಟಿ ನೀಡಿದ್ದ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು.
ಕೆ.ಎಲ್.ರಾಹುಲ್ ಪ್ರತಿವರ್ಷವೂ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ, ಪೂಜೆ ಸಲ್ಲಿಸುತ್ತಾರೆ. ಈ ಬಾರಿಯೂ ಆಗಮಿಸಿ ದೇವರಿಗೆ ಮಹಾಪೂಜೆ ನೆರವೇರಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಕೆಲವು ವರ್ಷಗಳಿಂದ ಕೆ.ಎಲ್.ರಾಹುಲ್ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ನಲ್ಲಿ ಮಿಂಚುತ್ತಿರುವುದಕ್ಕೂ ಸುಬ್ರಮಣ್ಯ ದೇವರ ಸೇವೆಯೇ ಕಾರಣ ಎನ್ನುವುದು ಅವರ ಸ್ನೇಹಿತ ವರ್ಗದ ಅಭಿಪ್ರಾಯ.

ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಕೆ.ಎಲ್.ರಾಹುಲ್ ಕ್ಷೇತ್ರದಲ್ಲಿ ಪೂಜೆ ನೆರವೇರಿಸಿ, ಅನ್ನದಾನ ಪೂರೈಸಿದರು. ಕ್ಷೇತ್ರದ ಆನೆ ಯಶಸ್ವಿನಿಯ ಆಶೀರ್ವಾದವನ್ನೂ ಪಡೆದರು. ದೇವಾಲಯದಲ್ಲಿ ಸಾಮಾನ್ಯರಂತೆ ಜನರ ನಡುವೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಮುಂದಿನ ಶನಿವಾರದಿಂದ 3 ಪಂದ್ಯಗಳ ಟಿ 20 ಸರಣಿ ಆರಂಭಗೊಳ್ಳಲಿದೆ. ಈ ಟಿ20 ತಂಡದಲ್ಲಿ ಕೆ.ಎಲ್.ರಾಹುಲ್ ಸ್ಥಾನ ಪಡೆದಿದ್ದಾರೆ. ಈಗಾಗಲೇ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ತಮ್ಮ ಸಾಮರ್ಥ್ಯ ತೋರಿರುವ ಕೆ.ಎಲ್.ರಾಹುಲ್ ಟಿ 20 ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದಾರೆ.

ಈ ಸಂದರ್ಭದಲ್ಲಿ ದೇವಾಲಯಕ್ಕೆ ಬಂದಿದ್ದ ಭಕ್ತರು ಕೆ.ಎಲ್.ರಾಹುಲ್ ಅವರಿಗೆ ಮುಂದಿನ ಟಿ 20 ಪಂದ್ಯಗಳಿಗಾಗಿ ಶುಭ ಹಾರೈಸಿದರು.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications