ಕೋಟ ಡಬಲ್ ಮರ್ಡರ್:ಪ್ರಮುಖ ಆರೋಪಿಗಳಿಬ್ಬರ ಬಂಧನ

ಉಡುಪಿ, ಫೆಬ್ರವರಿ 08: ಉಡುಪಿ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಕೋಟ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಪ್ರಮುಖ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ಈ ಇಬ್ಬರು ಪ್ರಮುಖ ಆರೋಪಿಗಳನ್ನು ಮಡಿಕೇರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಶೇಖರ ರೆಡ್ಡಿ ಮತ್ತು ರವಿ ಎಂದು ಗುರುತಿಸಲಾಗಿದೆ.

ಜನವರಿ 26ರ ತಡರಾತ್ರಿ ಕೋಟದಲ್ಲಿ ಭರತ್ ಹಾಗು ಯತೀಶ್ ಎಂಬವವರ ಭೀಕರ ಕೊಲೆಯಾಗಿತ್ತು. ಜನವರಿ 26 ರ ತಡರಾತ್ರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಭರತ್ ಮತ್ತು ಯತೀಶ್ ಅವರ ಮೇಲೆ ತಲವಾರಿನಿಂದ ದಾಳಿ ನಡೆಸಿದ್ದರು. ಕೋಟ ರಾಜಲಕ್ಷ್ಮಿ ಸಭಾಂಗಣದ ಸರ್ವೀಸ್ ರೋಡ್ ನಲ್ಲಿ ದುಷ್ಕರ್ಮಿಗಳು ಅಡ್ಡಗಟ್ಟಿ ದಾಳಿ ನಡೆಸಿದ್ದರು.

ಈ ಕೊಲೆ ಜಮೀನಿಗೆ ಸಂಬಂಧಿಸಿದ ವಿಚಾರದಲ್ಲಿ ನಡೆದಿದೆ ಎನ್ನಲಾಗಿತ್ತು. ಟಾಯ್ಲೆಟ್ ಪಿಟ್ ಒಂದಕ್ಕೆ ಸಂಬಂಧಿಸಿದ ಜಮೀನಿನ ವಿವಾದದಲ್ಲಿ ಸ್ನೇಹಿತ ಲೋಹಿತ್ ಎಂಬುವವನಿಗೆ ಬೆಂಬಲಿಸಿದ್ದಕ್ಕೆ ಭರತ್ ಮತ್ತು ಯತೀಶ್ ಮೇಲೆ ದಾಳಿ ನಡೆಸಲಾಗಿತ್ತು ಎಂದು ಶಂಕಿಸಲಾಗಿತ್ತು.

Kota double murder case:Two arrested

ಈ ಡಬಲ್ ಮರ್ಡರ್ ಕೊಲೆ ಪ್ರಕರಣದಲ್ಲಿ ರೌಡಿ ಶೀಟರ್ ಹರೀಶ್ ರೆಡ್ಡಿ ಮತ್ತು ಆತನ ಸಹಚರರು ಪ್ರಮುಖ ಆರೋಪಿಗಳು ಎಂದು ಹೇಳಲಾಗಿತ್ತು. ಕೃತ್ಯ ಎಸಗಿ ಹರೀಶ್ ರೆಡ್ಡಿ ಮತ್ತು ಆತನ ಸಹಚರರು ತೆಲೆಮರೆಸಿಕೊಂಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಕೋಟ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ಮಡಿಕೇರಿಯಲ್ಲಿ ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳ ಬಂಧನವಾಗಬೇಕಿದೆ ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಹರೀಶ್ ರೆಡ್ಡಿ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+