• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಯೋಧ್ಯೆ; ಕರ್ನಾಟಕದ ಯಾತ್ರಿನಿವಾಸ ನಿರ್ಮಾಣಕ್ಕೆ ಭೂಮಿ ಭರವಸೆ

By ಉಡುಪಿ ಪ್ರತಿನಿಧಿ
|

ಮಂಗಳೂರು, ಫೆಬ್ರವರಿ 22: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಮುಜರಾಯಿ ಸಚಿವರು ಭೇಟಿ ಮಾಡಿದರು. ಅಯೋಧ್ಯೆಯಲ್ಲಿ ಕರ್ನಾಟಕದ ಯಾತ್ರಿನಿವಾಸ ನಿರ್ಮಾಣಕ್ಕೆ ಭೂಮಿ ಒದಗಿಸಲು ಮನವಿ ಮಾಡಿದರು.

ಕೇರಳದ ಕಾಸರಗೋಡಿಗೆ ಚುನಾವಣೆಯ ಪ್ರಚಾರ ನಿಮಿತ್ತ ಆಗಮಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ಮಾಡಿದರು.

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು?

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮನ ಮಂದಿರಕ್ಕೆ ಭವಿಷ್ಯದಲ್ಲಿ ಭೇಟಿ ನೀಡುವ ಕರ್ನಾಟಕದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿನಿವಾಸ ಒಂದನ್ನು ನಿರ್ಮಾಣ ಮಾಡಲು 5 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಲ್ಲಿಸಿದ ಮನವಿಯನ್ನು ಪುರಸ್ಕರಿಸುವಂತೆ ಮನವಿ ಮಾಡಿಕೊಂಡರು.

ಅಯೋಧ್ಯೆ ರಾಮ ಮಂದಿರ ನಿರ್ಮಾಣ: ಅತಿಹೆಚ್ಚು ದೇಣಿಗೆ ನೀಡಿದವರ ಪಟ್ಟಿ

ಉತ್ತರ ಪ್ರದೇಶದ ಸರ್ಕಾರ ಕರ್ನಾಟಕದ ಯಾತ್ರಿ ನಿವಾಸಕ್ಕಾಗಿ ಶೀಘ್ರದಲ್ಲಿ ಭೂಮಿಯ ಮಂಜೂರು ಮಾಡಿದರೆ ಯಾತ್ರಿನಿವಾಸ ನಿರ್ಮಾಣಕ್ಕೆ ಅನುಕೂಲ ಆಗುವುದಾಗಿ ಸಚಿವರು ಯೋಗಿ ಆದಿತ್ಯನಾಥರಲ್ಲಿ ತಿಳಿಸಿದರು.

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ದೇಣಿಗೆ

ಸಚಿವರ ಮನವಿಗೆ ಪ್ರತಿಕ್ರಿಯಿಸಿದ ಯೋಗಿ ಆದಿತ್ಯನಾಥರು, ಕೂಡಲೇ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ ಕರ್ನಾಟಕದಿಂದ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು.

English summary
Minister for Muzrai Kota Srinivas Poojary met Uttar Pradesh CM Yogi Adityanath and request for land for Karnataka yatri nivas in ayodhya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X