ಜ.19ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡು ಕೆರೆ ಕಂಬಳ

ಮಂಗಳೂರು, ಜನವರಿ 01: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಈ ಬಾರಿ ಜನವರಿ 19 ರಂದು ನಡೆಯಲಿದೆ. ಈಗಾಗಲೇ ಕಂಬಳ ಕರೆ ಸಹಿತ ಇನ್ನಿತರ ಸಿದ್ಧತೆಗಳು ಭರದಿಂದ ಸಾಗುತ್ತಿದೆ.

ಜನವರಿ 19ರಂದು ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಕಂಬಳ ಗದ್ದೆಯಲ್ಲಿ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದರ್ಬೆ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆದಿದೆ.

ಈ ಬಾರಿ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಉದ್ಯಮಿ ಎನ್‌.ಮುತ್ತಪ್ಪ ರೈ ಸಾರಥ್ಯದಲ್ಲಿ 26ನೇ ವರ್ಷದ ಕೋಟಿ-ಚೆನ್ನಯ ಕಂಬಳ ನಡೆಯುತ್ತಿದೆ. ಕಂಬಳ ಉತ್ಸವಕ್ಕೆ ಮುಖ್ಯಮಂತ್ರಿ ಸಹಿತ ಸಚಿವರು, ಶಾಸಕರು, ಎಂಎಲ್ಸಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.

Koti Chanaiya Jodu kere Kambala will held on January 19

ಈಗಾಗಲೇ ಸ್ಪೀಕರ್ ಪ್ರತಾಪ್‌ಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ, ಸಚಿವ ಯು.ಟಿ.ಖಾದರ್ ಅವರನ್ನು ಕಂಬಳದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಕಂಬಳದಲ್ಲಿ ಆಕರ್ಷಣೆ ಕೇಂದ್ರ ಬಿಂದುವಾಗಿ ಸಿನಿಮಾ ನಟರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+