ಪಕ್ಷ ತೊರೆಯದಂತೆ ವಿಶ್ವನಾಥ್ ಗೆ ಪರಮೇಶ್ವರ್ ಮನವಿ

ಮಂಗಳೂರು, ಮೇ 02 : ಕಾಂಗ್ರೆಸ್ ನ ಮೈಸೂರು ಮಾಜಿ ಸಂಸದ ಎಚ್ ವಿಶ್ವನಾಥ್ ಪಕ್ಷ ತೊರೆಯಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮನವಿ ಮಾಡಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್. ವಿಶ್ವನಾಥ್ ಪಕ್ಷ ತೊರೆಯಬಾರದು. ಅವರೊಬ್ಬ ಹಿರಿಯ ಕಾಂಗ್ರೆಸ್ ನಾಯಕರು. ಸಣ್ಣ ಪುಟ್ಟ ತಪ್ಪುಗಳಿದ್ದರೆ ಸರಿಪಡಿಸಬಹುದು. ಕುಳಿತು ಮಾತನಾಡಿದರೆ ಸರಿಪಡಿಸದ ಸಮಸ್ಯೆ ಯಾವುದೂ ಇಲ್ಲ ಎಂದರು.[ಮೇ 10 ರಂದು ಎಚ್.ವಿಶ್ವನಾಥ್ ಜೆಡಿಎಸ್ ಗೆ?!]

Parameshwar

ಮಾಜಿ ಸಿಂ ಎಸ್. ಎಂ ಕೃಷ್ಣ ಅವರು ಕಾಂಗ್ರೆಸ್ ತೊರೆದ ನಂತರ ಪಕ್ಷಕ್ಕೆ ಹಾನಿಯಾಗಿಲ್ಲ. ಉಪ ಚುನಾವಣೆ ಫಲಿತಾಂಶವೇ ಇದಕ್ಕೆ ಸಾಕ್ಷಿಯಾಗಿದೆ ಪರಮೇಶ್ವರ್ ಪರೋಕ್ಷವಾಗಿ ಟಾಂಗ್ ಕೊಟ್ಟರು.

ಪರಮೇಶ್ವರ್ ಸಿಎಂ ಆಗಬೇಕು ಎನ್ನುವ ಪೂಜಾರಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಸಿಎಂ ಆಗಬೇಕು ಎಂದು ಪೂಜಾರಿಯವರು ಹೇಳಿಕೆ ನೀಡಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ನುಣುಚಿಕೊಂಡರು.

ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲೆಗೆ "ಬೆಂಕಿ ಹಚ್ಚುವ" ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಅವರೊಬ್ಬ ಜವಾಬ್ದಾರಿಯುತ ಜನಪ್ರತಿನಿಧಿ, ಹೇಳಿಕೆಯನ್ನು ಪ್ರಜ್ಞಾಪೂರ್ವಕವಾಗಿ ನೀಡಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+