• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬ್ಯಾಂಕ್ ಪರೀಕ್ಷಾ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ ಕರವೇ ಕಾರ್ಯಕರ್ತರ ಬಂಧನ

|

ಮಂಗಳೂರು, ಸೆಪ್ಟೆಂಬರ್ 10: ಬ್ಯಾಂಕ್ ಪರೀಕ್ಷೆ ಬರೆಯಲು ಬಂದಿದ್ದ ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಡೆಯೊಡ್ಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನ ವಿವಿಧ ಹುದ್ದೆಗಳಿಗೆ ಇಂದು ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಈ ಪರೀಕ್ಷೆ ನಡೆಯುತ್ತಿದ್ದು ಮಂಗಳೂರು ಹೊರವಲಯದ ಬೊಂದೇಲ್ ನಲ್ಲಿರುವ ಬೆಸೆಂಟ್ ವಿದ್ಯಾಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಬ್ಯಾಂಕ್ ಪರೀಕ್ಷೆ ನಡೆಸಲಾಗುತ್ತಿದೆ.

ಹಲವು ರಾಜ್ಯಗಳ ಅಭ್ಯರ್ಥಿಗಳು ಭಾಗಿ

ಹಲವು ರಾಜ್ಯಗಳ ಅಭ್ಯರ್ಥಿಗಳು ಭಾಗಿ

ಈ ಹಿನ್ನೆಲೆಯಲ್ಲಿ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಿದ್ದ ಕರ್ನಾಟಕದ ಅಭ್ಯರ್ಥಿಗಳು ಸೇರಿದಂತೆ ಕೇರಳ, ತಮಿಳುನಾಡು ,ಆಂಧ್ರ ಸೇರಿದಂತೆ ಇತರ ರಾಜ್ಯಗಳ ಅಭ್ಯರ್ಥಿಗಳು ಈ ಪರೀಕ್ಷೆ ಎದುರಿಸುತ್ತಿದ್ದಾರೆ .

ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ತಡೆ

ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ತಡೆ

ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಡೆಯೊಡ್ಡಲು ಯತ್ನಿಸಿದರು. ಪರೀಕ್ಷಾ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು .

ಬ್ಯಾಂಕ್ ನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ

ಬ್ಯಾಂಕ್ ನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ

ಈ ಮೊದಲು ಪರೀಕ್ಷಾ ಕೇಂದ್ರದ ಎದುರು ಜಮಾಯಿಸಿದ ಕರವೇ ಕಾರ್ಯಕರ್ತರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನ ಆಡಳಿತ ಮಂಡಳಿ ಕನ್ನಡ ವಿರೋಧಿ ನೀತಿ ಅನುಸರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು .

ಅನ್ಯ ರಾಜ್ಯದವರಿಗೆ ಮಣೆ

ಅನ್ಯ ರಾಜ್ಯದವರಿಗೆ ಮಣೆ

ಕನ್ನಡಿಗರ ಬ್ಯಾಂಕ್ ಆಗಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ. ಕನ್ನಡಿಗರಿಗೆ ಆದ್ಯತೆ ನೀಡದೇ ಅನ್ಯ ರಾಜ್ಯದವರಿಗೆ ಮಣೆ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು .

ಬ್ಯಾಂಕ್ ಪರೀಕ್ಷೆ ಕೂಡಲೆ ರದ್ದುಗೊಳಿಸಿ

ಬ್ಯಾಂಕ್ ಪರೀಕ್ಷೆ ಕೂಡಲೆ ರದ್ದುಗೊಳಿಸಿ

ಬ್ಯಾಂಕ್ ತನ್ನ ಈ ಧೋರಣೆ ನಿಲ್ಲಿಸಿ ಬ್ಯಾಂಕ್ ಪರೀಕ್ಷೆಯನ್ನು ಈ ಕೂಡಲೇ ರದ್ದು ಮಾಡಬೇಕು ಹಾಗೂ ಕನ್ನಡಿಗರಿಗೆ ಆದ್ಯತೆ ನೀಡಿ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು .

ಸೆಪ್ಟೆಂಬರ್ 16 ರಂದು ಉಗ್ರ ಹೋರಾಟ

ಸೆಪ್ಟೆಂಬರ್ 16 ರಂದು ಉಗ್ರ ಹೋರಾಟ

ಒಂದೊಮ್ಮೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ತನ್ನ ಹಠಮಾರಿ ಧೋರಣೆ ಮುಂದುವರೆಸಿದರೆ ಇದೇ ಬರುವ ಸೆಪ್ಟೆಂಬರ್ 16 ರಂದು ಉಗ್ರ ಹೋರಾಟ ನಡೆಸುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಸಿದ್ದಾರೆ .

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Rakshana Vedike today interrupted the Banking exams, which was held by Karnataka Vikas Gramina Bank here in Mangaluru on September 10. Protesters demanded that this exam should be allowed to write only for those in Karnataka and not for those apart from Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more